ಮೈಸೂರು | ಮುಸ್ಲಿಮರ ವಿರುದ್ಧ ಅವಹೇಳನ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

Date:

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಾಪ್‌ ಸಿಂಹ ವಿರುದ್ಧ ಮೈಸೂರಿನ ಉದಯಗಿರಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರತಾಪ್ ಸಿಂಹ ಬೆಂಬಲಿಗನೇ ಎಂದು ಹೇಳಲಾದ ಸುರೇಶ್ ಎಂಬಾತ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಾಕಾರಿ ಪೋಸ್ಟರ್‌ ಹಂಚಿಕೊಂಡಿದ್ದ. ಆತನ ವಿರುದ್ಧ ಫೆಬ್ರವರಿ 10ರಂದು ಮುಸ್ಲಿಂ ಸಮುದಾಯವು ಉದಯಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಲ್ಲುತೂರಾಟವೂ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯನ್ನು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದ ಬಿಜೆಪಿ ಮಾರನೆಯ ದಿನ (ಫೆ.11) ಘಟನಾ ಸ್ಥಳಕ್ಕೆ ಧಾವಿಸಿತ್ತು. ಪ್ರತಾಪ್ ಸಿಂಹ ಸೇರಿದಂತೆ ಹಲವರು ಉದಯಗಿರಿಗೆ ತೆರಳಿದ್ದರು. ಆದರೆ, ಅವರನ್ನು ತಡೆದ ಪೊಲೀಸರು ಅಲ್ಲಿಂದ ವಾಪಸ್ ಕಳಿಸಿದ್ದರು. ಆದಾಗ್ಯೂ, ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲೇ ಜನರನ್ನು ಗುಂಪುಗೂಡಿಸಿಕೊಂಡಿದ್ದ ಪ್ರತಾಪ್ ಸಿಂಹ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಾಕಾರಿ ಮಾತುಗಳನ್ನಾಡಿದ್ದರು. ಇದೀಗ, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...