ಮೈಸೂರು | ವಿರೋಧ ಪಕ್ಷದವರ ಹಗರಣ ಸಾಕಷ್ಟಿದೆ, ಬಿಚ್ಚಿಡುತ್ತೇವೆ: ಸಿದ್ದರಾಮಯ್ಯ

Date:

ವಿರೋಧ ಪಕ್ಷದವರ ಹಗರಣಗಳು ಬಹಳಷ್ಟಿವೆ. ಈಗ ಎಲ್ಲವನ್ನೂ ಬಿಚ್ಚಿಡುತ್ತೇವೆ. ಯಾರೆಲ್ಲ ತಪ್ಪಿತಸ್ಥರು ಇದ್ದಾರೆಯೋ ಅವರೆಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನನಗೆ ಮಸಿ ಬಳಿಯಲು ವಿರೋಧ ಪಕ್ಷದವರು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ‌. ನನಗೆ ಮಸಿ ಬಳಿದರೆ ರಾಜಕೀಯವಾಗಿ ಅನುಕೂಲ ಆಗುತ್ತದೆ ಎನ್ನುವ ಭ್ರಮೆಯಲ್ಲಿ ವಿರೋಧ ಪಕ್ಷದವರು ಇದ್ದಾರೆ” ಎಂದರು.

“ನನ್ನ ವಿರುದ್ಧದ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನಿನ ಮೂಲಕ ಪ್ರತ್ಯುತ್ತರ ಕೊಡುತ್ತೇನೆ. ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಹಲವು ‌ವಿಚಾರ ಬಿಚ್ಚಿಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಗಳನ್ನು ಜನರ ಮುಂದೆ ಇಡುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ.ವೈ.ವಿಜಯೇಂದ್ರ, ಬಿ‌.ಎಸ್. ಯಡಿಯೂರಪ್ಪ , ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈಗಾಗಲೇ ಕೆಲವು ಹಗರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಆ ಬಗ್ಗೆ ಹೆಚ್ಚು ಮಾತನಾಡುತ್ತೇನೆ. ಇನ್ನೂ ಕೆಲವು ಹಗರಣಗಳು ಬಾಕಿ ಇವೆ ಎಂದರು.

“ಬಿಜೆಪಿ- ಜೆಡಿಎಸ್ ನಾಯಕರ ಆರೋಪಗಳನ್ನು ಎದುರಿಸಲು ಸಿದ್ಧನಿದ್ದೇನೆ. ಬಿಜೆಪಿ- ಜೆಡಿಎಸ್‌ನವರು ಪಾದಯಾತ್ರೆ ಮಾಡಿದ್ದಕ್ಕೆ ನಾವು ಜನಾಂದೋಲನ ಸಮಾವೇಶ ಮಾಡಿದೆವು. ಅವರು ಮಾಡುತ್ತಿರುವ ಆರೋಪ ಸುಳ್ಳು ಎಂದು ತಿಳಿಸಲು ಜನಾಂದೋಲನ ಸಮಾವೇಶ ನಡೆಸಿದೆವು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...