ಮೈಸೂರು | ‘ಸೋಮಾರಿ ಸಿದ್ದ’ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್

Date:

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಭಾನುವಾರ, ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ದ ಎಂದು ಅವಹೇಳನಕಾರಿಯಾಗಿ ಮೂದಲಿಸಿದ್ದರು. ಅಲ್ಲದೆ, ಸಿದ್ದರಾಮಯ್ಯ ಜಾತಿ-ಜಾತಿಗಳ ನಡುವೆ ದ್ವೇಷ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮೈಸೂರು ಗ್ರಾಮಾಂತರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...