ಮೈಸೂರು | ಮೈಮುಲ್ ಅಧ್ಯಕ್ಷರಿಗೆ ಸಚಿವ ವೆಂಕಟೇಶ್‌ ಕಿರುಕುಳ; ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಕೆ. ವೆಂಕಟೇಶ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಆರೋಪಿಸಿದ್ದಾರೆ. ವೆಂಕಟೇಶ್ ಅವರು ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಉಳಿದವರೊಂದಿಗೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮಗೆ ಆರು ತಿಂಗಳ ಅವಧಿಯಲ್ಲಿ 24 ಬಾರಿ ನೋಟಿಸ್ ನೀಡಿದ್ದಾರೆ. ವಾಸಸ್ಥಳ ದೃಡೀಕರಣ ಪತ್ರ, 65 ಎನ್‌ಕ್ವೈರಿ, 64 ಎನ್‌ಕ್ವೈರಿ ಹೆಸರಿನಲ್ಲಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ನನ್ನನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದ ಇಳಿಸಲು ವೆಂಕಟೇಶ್ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಗನನ್ನು ರಾಜಕೀಯಕ್ಕೆ ತರಲು, ಅವರಿಗೆ ಟಿಕೆಟ್ ಕೊಡಿಸಲು ನನ್ನನ್ನು ಹಿಂದೆ ಸರಿಯಲು ಪ್ರಯತ್ನಿಸುತ್ತಿದ್ದಾರೆ. ಮೈಮುಲ್‌ನಿಂದ ಹೊರ ಕಳಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ಮೈಮುಲ್ ನಿರ್ದೇಶಕರ ಮೇಲೂ ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...