ಮೈಸೂರು | ಪ್ರತಾಪ್ ಸಿಂಹಗೆ ಸಿಗಲ್ವಾ ಬಿಜೆಪಿ ಟಿಕೆಟ್?; ಬಾಲರಾಮ ಮೂರ್ತಿ ಕೆತ್ತಿದ ಶಿಲ್ಪಿ ಸ್ಪರ್ಧೆ?

Date:

ಕೇಸರಿ ಬಾವುಟ ಹಿಡಿದು ತನಗೆಲ್ಲಿ ಮೈಲೇಜ್‌ ಸಿಗುತ್ತದೋ ಅಲ್ಲಿ ಕಾಣಿಸಿಕೊಳ್ಳಲು ಯತ್ನಿಸುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗುವುದೇ ಸಂಶಯ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಒಕ್ಕಲಿಗರ ಪ್ರಾಬಲ್ಯವಿರುವ ಮೈಸೂರು ಕ್ಷೇತ್ರವನ್ನು ಜೆಡಿಎಸ್‌ ತನ್ನ ಪಾಲಿಗೆ ಪಡೆದುಕೊಳ್ಳಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದೇ, ಹೊತ್ತಿನಲ್ಲಿ, ಅಯೋಧ್ಯೆಯ ರಾಮಮಂದಿರ ಬಾಲರಾಮ ಮೂರ್ತಿ ಕೆತ್ತನೆ ಮಾಡಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಬಿಜೆಪಿ ಟಿಕೆಟ್‌ ನೀಡಲಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಬಿಜೆಪಿ ಜೊತೆಗೆ ಗುದ್ದಾಡಿ ಜೆಡಿಎಸ್‌ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ತನ್ನ ಪಾಲಿಗೆ ತೆಗೆದುಕೊಂಡರೆ ಪ್ರತಾಪ್ ಸಿಂಹ ನಿರುದ್ಯೋಗಿಯಾಗಬಹುದು, ಅಥವಾ ಪಕ್ಷದ ಕೆಲಸಗಳಿಗೆ ಸೀಮಿತವಾಗಬಹುದು. ಹಾಗಾದಲ್ಲಿ ಅವರು ಹಿಂದುತ್ವ ಕೋಮು ಹೋರಾಟಕ್ಕೆ ಇನ್ನೂ ಹೆಚ್ಚು ಸಮಯ ಕೊಡಬಹುದು ಎಂಬ ವ್ಯಂಗ್ಯದ ಮಾತುಗಳು ಮೈಸೂರಿನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ, ಜೆಡಿಎಸ್‌ ಪಾಲಿಗೆ ಕ್ಷೇತ್ರವನ್ನು ಬಿಟ್ಟುಕೊಡದೆ, ಬಿಜೆಪಿಯೇ ಉಳಿಸಿಕೊಂಡರೂ, ರಾಮಮಂದಿರ ಮೈಲೇಜ್‌ ಪಡೆದುಕೊಂಡು ಮತಗಿಟ್ಟಿಸಿಕೊಳ್ಳಲು ಬಿಜೆಪಿ, ಅರುಣ್‌ ಯೋಗಿರಾಜ್‌ಗೆ ಟಿಕೆಟ್ ನೀಡಬಹುದು. ರಾಮ ಮೂರ್ತಿ ಕೆತ್ತಿದವರನ್ನು ಸಂಸತ್ತಿಗೆ ಕಳಿಸುವಂತೆ ಪ್ರಚಾರಾಭಿಯಾನ ಮಾಡಿ, ಹೇಗಾದರೂ ಒಂದು ಸ್ಥಾನವನ್ನು ಬಿಜೆಪಿ ಗಟ್ಟಿಗೊಳಿಸಿಕೊಳ್ಳಲು ತಂತ್ರ ಎಣೆಯಬಹುದು ಎಂದೂ ಹೇಳಲಾಗುತ್ತಿದೆ.

ಟ್ವಿಟರ್‌ನಲ್ಲಿ ಅರುಣ್‌ ಯೋಗಿರಾಜ್‌ಗೆ ಬಿಜೆಪಿ ಟಿಕೆಟ್‌ ನೀಡಬಹುದು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಹಲವರು ಪ್ರತಾಪ್‌ ಸಿಂಹಗೆ ಟಿಕೆಟ್‌ ದೊರೆಯುವುದಿಲ್ಲವೆಂದು ಹೇಳುತ್ತಿದ್ದಾರೆ. ಅಲ್ಲದೆ, ಭಾನುವಾರ ಮೈಸೂರಿಗೆ ಭೇಟಿ ನೀಡಿರುವ ಅಮಿತ್‌ ಶಾ ಅವರನ್ನು ಸ್ವಾಗತಿಸುವವರ ಪಟ್ಟಿಯಲ್ಲಿಯೂ ಪ್ರತಾಪ್‌ ಸಿಂಹ ಅವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದು ಪ್ರತಾಪ್ ಸಿಂಹ ಅವರಿಗೆಗೆ ಟಿಕೆಟ್‌ ಕೈ ತಪ್ಪಲಿದೆ ಎನ್ನುವ ಅನುಮಾನಕ್ಕೆ ಪುಷ್ಠಿ ನೀಡಿದೆ.

‘ದಿ ಅನಲೈಜರ್‌’ ಎಂಬ ಟ್ವಿಟರ್‌ ಖಾತೆಯು, “ಅರುಣ್ ಯೋಗಿರಾಜ್ ಮೈಸೂರಿನಿಂದ ಬಿಜೆಪಿ ಟಿಕೆಟ್ ಪಡೆದು ಲೋಕಸಭೆಗೆ ಸ್ಪರ್ಧಿಸಬಹುದು. (ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹದ ಶಿಲ್ಪಿ)” ಎಂದು ಪೋಸ್ಟ್‌ ಮಾಡಿದೆ.

ಕುಸುಮ್ ಶರ್ಮಾ ಎಂಬವರು, “2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅರುಣ್ ಯೋಗಿರಾಜ್ ಅವರಿಗೆ ಶುಭ ಹಾರೈಸುತ್ತೇನೆ. ರಾಮಲಲ್ಲಾ ನಿಮ್ಮನ್ನು ಆಶೀರ್ವದಿಸುತ್ತಾರೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಅಮಿತಾಬ್ ಚೌದರಿ ಎಂಬವರು, “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈಸೂರಿನಿಂದ ಅಯೋಧ್ಯೆ ರಾಮಮಂದಿರಕ್ಕಾಗಿ ರಾಮಲಲ್ಲಾನ ವಿಗ್ರಹವನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಕಣಕ್ಕಿಳಿಸಬಹುದು” ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು, ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗದೇ ಹೋಗಬಹುದು ಎಂಬುದರ ಬಗ್ಗೆ ಟ್ವೀಟ್‌ ಮಾಡಿರುವ ಜೆಪಿ ಚಡ್ಡಾ ಎಂಬವರು, “ಪ್ರತಾಪ್ ಸಿಂಹ ಅವರನ್ನು ಬಿಜೆಪಿ ಕೈಬಿಡಲು ಕಾರಣವೇನು? ಅವರು ಕರ್ನಾಟಕ ಬಿಜೆಪಿಯ ಅತ್ಯುತ್ತಮ ಸಂಸದ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...