ಮೈಸೂರು | ಗೃಹ ಸಚಿವ ಅಮಿತ್ ಶಾ ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ

Date:

ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಸಚಿವರು, ಮುಖಂಡರು ಹಾಗೂ ಕಾರ್ಯಕರ್ತರು ಅಮಿತ್ ಶಾ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹದ್ದಾಗಿದೆ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾಗೊಳಿಸಬೇಕು ಮತ್ತು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತವನ್ನು ಹಿಂದು ರಾಷ್ಟ್ರ ಮಾಡಲು ಅಮಿತ್ ಶಾ ಮತ್ತು ಬಿಜೆಪಿಗರು ಸಂವಿಧಾನದ ಆಶಯವನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಎನ್ನುವುದು ವ್ಯಸನ ಎಂದಿರುವುದು ರಾಷ್ಟ್ರಕ್ಕೆ ಮಾಡಿದ ಅಪಮಾನ.ಅಮಿತ್ ಶಾ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಅವರನ್ನು ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾಗೊಳಿಸಬೇಕು” ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮುಗಲಭೆ ಸೃಷ್ಠಿಸಿ ಗುಜರಾತ್‌ನಿಂದ ಹೊರ ಬಂದಿರುವ ಅಮಿತ್ ಶಾ ದೇಶದ ಗೃಹ ಸಚಿವರಾಗಿರುವುದೇ ಅಪಾಯಕಾರಿ. ಅವರು ಆರ್‌ಎಸ್‌ಎಸ್‌ ನಿರ್ದೇಶನದಂತೆ ಜನರ ಸಾಂವಿಧಾನಿಕ ಆಕಾಂಕ್ಷೆಗಳನ್ನು ನಾಶ ಮಾಡುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ಶಾಸಕ ದರ್ಶನ್ ದ್ರುವನಾರಾಯಣ, ತಿಮ್ಮಯ್ಯ, ಹರೀಶ್ ಗೌಡ, ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಪುಷ್ಪಾ ಅಮರನಾಥ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...