ಮೈಷುಗರ್‌ ಸಕ್ಕರೆ ಕಾರ್ಖಾನೆಗೆ ವಿದ್ಯುತ್‌ ಪೂರೈಸಲು ಒತ್ತಾಯ: ಇಂಧನ ಸಚಿವರಿಗೆ ದಿನೇಶ್‌ ಗೂಳಿಗೌಡ ಪತ್ರ

Date:

  • ಬಾಕಿ ಇರುವ 40.86 ಕೋಟಿ ರೂ. ವಿದ್ಯುತ್ ಬಿಲ್‌ ಹಂತ ಹಂತವಾಗಿ ಕಟ್ಟಿಸಿಕೊಳ್ಳಲು ಮನವಿ
  • ವಿದ್ಯುತ್‌ ಪೂರೈಕೆ ಸ್ಥಗಿತಗೊಂಡರೆ ರೈತರಿಗೆ ಸಮಸ್ಯೆ ಆಗುವ ಕುರಿತು ಗಮನ ಸೆಳೆದ ಶಾಸಕ

ಮೈಷುಗರ್‌ ಸಕ್ಕರೆ ಕಾರ್ಖಾನೆಯು ಮಂಡ್ಯ ಭಾಗದ ರೈತರ ಜೀವನಾಡಿಯಾಗಿದೆ. ಇಲ್ಲಾಗುವ ಕಬ್ಬಿನ ಕಟಾವನ್ನು ನಂಬಿಕೊಂಡು ಲಕ್ಷಾಂತರ ರೈತ ಕುಟುಂಬಗಳು ಇವೆ. ಅಲ್ಲದೆ, ಈ ಬಾರಿ ಸುಮಾರು 5 ಲಕ್ಷ ಟನ್‌ ಕಬ್ಬನ್ನು ನುರಿಸುವ ಗುರಿಯನ್ನು ಹಾಕಿಕೊಂಡಿದೆ.

ಈಗ ಎದುರಾಗಿರುವ ಸಮಸ್ಯೆಯೆಂದರೆ ಈ ಹಿಂದಿನಿಂದಲೂ ನಷ್ಟದಲ್ಲಿದ್ದ ಕಂಪನಿಗೆ ವಿದ್ಯುತ್‌ ಬಿಲ್‌ ಕಟ್ಟಲು ಸಾಧ್ಯವಾಗಿಲ್ಲ. 40.86 ಕೋಟಿ ರೂಪಾಯಿಗಳ ವಿದ್ಯುತ್ ಬಿಲ್‌ ಬಾಕಿ ಇದ್ದು, ಇದನ್ನು ಹಂತ ಹಂತವಾಗಿ ಪಾವತಿ ಮಾಡಲು ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸಲು ಅಗತ್ಯ ವಿದ್ಯುತ್ ಸರಬರಾಜು ಮಾಡಲು ಚೆಸ್ಕಾಂನವರಿಗೆ ಆದೇಶಿಸಬೇಕು ಎಂದು ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಇಂಧನ ಸಚಿವ ಕೆ ಜೆ ಜಾರ್ಜ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಮಂಡ್ಯ ಭಾಗದಲ್ಲಿ ಕಬ್ಬು ಪ್ರಮುಖ ಬೆಳೆಯಲ್ಲೊಂದಾಗಿದೆ. ಈ ಹಂತದಲ್ಲಿ ಕಬ್ಬು ನುರಿಸಲು ತೊಂದರೆಯಾದರೆ ಅದು ರೈತರ ಮೇಲೆ ಬಹಳವೇ ಪರಿಣಾಮವನ್ನು ಬೀರುತ್ತದೆ. ರೈತರ ಹಿತದೃಷ್ಟಿಯಿಂದ ತಾವು ಮಧ್ಯ ಪ್ರವೇಶ ಮಾಡಿ ಕಬ್ಬು ನುರಿಸಲು ವಿದ್ಯುತ್‌ ಸಮಸ್ಯೆ ಆಗದಂತೆ ಆದೇಶಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಅಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ದಿನೇಶ್‌ ಗೂಳಿಗೌಡ

ಪತ್ರದಲ್ಲೇನಿದೆ?

“ಮೈಸೂರು ಸಕ್ಕರೆ ಕಂಪೆನಿ ನಿಯಮಿತ, ಮಂಡ್ಯ ಕಂಪನಿಯು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 5 ಲಕ್ಷ ಟನ್ ಕಬ್ಬನ್ನು ಈ ಕಾರ್ಖಾನೆಗೆ ಸರಬರಾಜು ಮಾಡಲು ರೈತರು ಒಪ್ಪಂದ ಮಾಡಿಕೊಂಡಿದ್ದಾರೆ. ಪ್ರಸ್ತುತ ಈ ಕಂಪೆನಿಯವರು ಚೆಸ್ಕಾಂಗೆ ಸುಮಾರು ರೂ.40.86 ಕೋಟಿಗಳ ವಿದ್ಯುತ್ ಬಿಲ್‌ ಬಾಕಿ ಮೊತ್ತವನ್ನು ಪಾವತಿಸಬೇಕಾಗಿದೆ. ಆದರೆ, ಕಂಪನಿಯ ಆರ್ಥಿಕ ಪರಿಸ್ಥಿತಿಯು ಇನ್ನೂ ಸುಧಾರಿಸದಿರುವುದರಿಂದ ವಿದ್ಯುತ್ ಬಾಕಿ ಮೊತ್ತವನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

“ಆದುದರಿಂದ, ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ವಿದ್ಯುತ್ ಅವಶ್ಯಕತೆಯಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡಲು ಮತ್ತು ಬಾಕಿ ಮೊತ್ತವನ್ನು ಹಂತ-ಹಂತವಾಗಿ ಪಾವತಿಸಲು ಸಕ್ಕರೆ ಕಾರ್ಖಾನೆಗೆ ಅನುಮತಿ ನೀಡಲು ವ್ಯವಸ್ಥಾಪಕ ನಿರ್ದೇಶಕರು, ಚೆಸ್ಕಾಂ ಇವರಿಗೆ ಆದೇಶಿಸಬೇಕು” ಎಂದು ಮಂಡ್ಯ ಜಿಲ್ಲೆಯ ರೈತರ ಪರವಾಗಿ ಶಾಸಕ ದಿನೇಶ್‌ ಗೂಳಿಗೌಡ ಕೋರಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...