ನಾಗಮಂಗಲ ಗಲಾಟೆ ಕಮ್ಯೂನಲ್‌ಗೆ ತಿರುಗುವುದು ಬೇಡ: ಸಚಿವ ಚಲುವರಾಯ ಸ್ವಾಮಿ ಮನವಿ

Date:

ನಾಗಮಂಗಲದಲ್ಲಿ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ತಿಳಿಸಿದರು.

ನಾಗಮಂಗಲ ಎಪಿಎಂಸಿ ಕಚೇರಿಯಲ್ಲಿ ಸಭೆ ನಡೆಸಿ ಅಧಿಕಾರಿಗಳಿಂದ‌ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,”ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು” ಎಂದರು.

“ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ. ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್‌

“ನಮ್ಮ ನಾಗಮಂಗಲ ಶಾಂತಿ ಸೌಹಾರ್ದತೆಯ ತಾಣ. ಇಲ್ಲಿ ಯಾವುದೇ ಅನುಚಿತ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ. ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ ಘರ್ಷಣೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು” ಎಂದರು.

“ಪೊಲೀಸರು ಕನ್ವಿನ್ಸ್ ಮಾಡುವ ಪ್ರಯತ್ನ ಯಶಸ್ವಿಯಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ದುಡುಕುವುದು ಬೇಡ. ದೇವರ ಕೆಲಸ ಈ ರೀತಿಯಾಗಿ ಕಮ್ಯೂನಲ್‌ಗೆ ತಿರುಗುವುದು ಬೇಡ. ಶಾಂತಿ ಕಾಪಾಡುವ ಕೆಲಸ ಎಲ್ಲರದ್ದೂ ಆಗಬೇಕಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ಅವರು ಮಾಜಿ ಮುಖ್ಯಮಂತ್ರಿಗಳು, ಸಾಕಷ್ಟು ಅನುಭವ ಇದೆ. ಅವರು ಇದನ್ನು ತಿಳಿ ಆಗಲು ಸಲಹೆ, ಸೂಚನೆ ಮಾರ್ಗದರ್ಶನ ಕೊಡ್ತಾರೆ ಅಂದುಕೊಂಡಿದ್ದೆ.ಅದನ್ನ ಮೀರಿ ಅವರು ರಾಜಕೀಯವಾಗಿ ಮಾತನಾಡ್ತಾರೆ ಅಂದರೆ ದೇವರು ಒಳ್ಳೆದು ಮಾಡ್ಲಿ. ನಾನು‌ ಖಂಡಿತವಾಗಿ ರಾಜಕೀಯವಾಗಿ ಉತ್ತರ ನೀಡಲು ಹೋಗಲ್ಲ” ಎಂದರು.

“ನಮ್ಮ ಸರ್ಕಾರದ ಮೊದಲ ಆದ್ಯತೆ ಸಾರ್ವಜನಿಕರ ರಕ್ಷಣೆ ಮಾಡುವುದು. ನಂತರ ವಿರೋಧ ಪಕ್ಷದ ಪ್ರಚೋದನೆ ಅಥಾವ ಪ್ರಶ್ನೆಗೆ ಉತ್ತರ ಕೊಡ್ತೀವಿ. ಕುಮಾರಸ್ವಾಮಿ ಅಲ್ಲಿಯ ಸಂಸದರು ನಾನು ಅವರ ಜೊತೆಗೆ ಕೆಲಸ ಮಾಡ್ತಾ ಇದ್ದೇನೆ. ಅವರಿದ್ದಾಗ ಏನೇನು ಆಗಿದೆ ಅಂತ ಎಲ್ಲರಿಗೂ ಗೊತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...