ನಾಗಮಂಗಲ ಗಲಾಟೆ | 52 ಜನರ ಬಂಧನ, ಕೃತ್ಯ ಕ್ಯಾಮೆರಾದಲ್ಲಿ ಸೆರೆ: ಗೃಹ ಸಚಿವ ಪರಮೇಶ್ವರ್

Date:

‌ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿನ್ನೆ ನಡೆದ ಘಟನೆ ಆಗಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಘಟನೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತಂದಿದ್ದಾರೆ”‌ ಎಂದರು.

“ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರಿಗೆ ಘರ್ಷಣೆ ಮಾಡಿಕೊಂಡಿದ್ದಾರೆ. ಆನಂತರ ಎಲ್ಲವೂ ಸರಿ ಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಘರ್ಷಣೆ ಮಾಡಿಕೊಂಡಿದ್ದಾರೆ, ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗುವುದಿಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ, ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದು ಬೇಡ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್‌

“ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಿದ್ದಾರೆ, ಬೆಂಕಿ ಹಾಕಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲು ಏಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ” ಎಂದು ಸ್ಪಷ್ಟಪಡಿಸಿದರು.

“ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ” ಎಂದರು.

“ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಸಲಹೆ ಕೊಡುವುದಾದರೆ ಸ್ವಾಗತ ಮಾಡುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...