ಸರ್ಕಾರದ ಘನತೆ ಉಳಿಸಲು ಸಚಿವ ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮ ವಿಚಾರದಲ್ಲಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ, “ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ” ಎಂದರು.

ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ್ಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಅಕ್ರಮ | ಸಿಎಂ ಸಿದ್ದರಾಮಯ್ಯ ಸೂಚನೆ, ಸಚಿವ ಬಿ.ನಾಗೇಂದ್ರ ರಾಜೀನಾಮೆ

ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...