ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್‌

Date:

  • ಎರಡು ಅವಧಿಗೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕಟೀಲ್
  • ಚುನಾವಣಾ ಸೋಲಿನ ಹೊಣೆ ಹೊತ್ತ ಬಿಜೆಪಿ ಅಧ್ಯಕ್ಷ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಹೇಳಿದ್ದೆ ಎಂದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದವರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳ್ಳಾರಿಯಲ್ಲಿ ಕಟೀಲ್‌ ಹೇಳಿದ್ದು

ಬಳ್ಳಾರಿಯಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯಾಧ್ಯಕ್ಷ ಹುದ್ದೆಗೆ ಹಲವರು ಇಟ್ಟಿರುವ ಬೇಡಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ತಮ್ಮ ಅಧಿಕಾರ ಅವಧಿಯ ಬಗೆಗೂ ಮಾಹಿತಿ ಹಂಚಿಕೊಂಡ ಅವರು ಅಧ್ಯಕ್ಷ ಪದವಿ ಬದಲಾವಣೆ ಸಹಜವಾಗಿ ನಡೆಯುತ್ತದೆ. ಅದಕ್ಕೆ ಪಕ್ಷ ತಯಾರಾಗುತ್ತಿದೆ ಎಂದಿದ್ದರು.

ನಾನೀಗ ರಾಜ್ಯಾಧ್ಯಕ್ಷನಾಗಿ ಎರಡು ಅವಧಿಯನ್ನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಪಕ್ಷ ವಿಚಲಿತವಾಗಿದೆ. ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ ಎಂದು ಕಟೀಲ್ ಹೇಳಿದರು.press note

ಈ ಸುದ್ದಿ ಓದಿದ್ದೀರಾ?: ಲೋಕಸಭೆ ಚುನಾವಣೆ : ಜೆಡಿಎಸ್ ಜೊತೆ ಹೊಂದಾಣಿಕೆ ಸುಳಿವು ನೀಡಿದ ಸಿಪಿವೈ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಹಾಗೂ ಅರ್ಹರನ್ನು ಪಕ್ಷ ನೇಮಕ ಮಾಡುತ್ತದೆ. ನಮ್ಮ ಪಕ್ಷದಲ್ಲೂ ಅನುಭವಿ ನಾಯಕರ ದಂಡೇ ಇದೆ. ಹೊಸ ಜವಾಬ್ದಾರಿ ಹೊರಲು ಹಲವರು ಸಿದ್ದರಿದ್ದಾರೆ ಎಂದರು.

ಹಾಗೆಯೇ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿರುವ ಮಾಜಿ ಸಚಿವ ಸೋಮಣ್ಣ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ನಳಿನ್‌ ಕುಮಾರ್‌ ಕಟೀಲ್‌

ಪ್ರಸ್ತುತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ನಳಿನ್‌ ಕುಮಾರ್‌ ಕಟೀಲ್‌ 2004ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

ಕೃಷಿಕ ಹಾಗೂ ವೃತ್ತಿಯಿಂದ ಸಿವಿಲ್ ಕಾಂಟ್ರಾಕ್ಟರ್ ಆಗಿರುವ ಕಟೀಲ್‌ ರಾಜಕೀಯದಲ್ಲಿ ಹೆಸರು ಮಾಡಿದ್ದು, 2009ರಲ್ಲಿ ಅಂದಿನ ಲೋಕಸಭ ಚುನಾವಣೆಯಲ್ಲಿ ಮಾಜಿ ಗೃಹ ಮಂತ್ರಿ, ಕಾಂಗ್ರೆಸ್ಸಿನ ಜನಾರ್ಧನ ಪೂಜಾರಿ ಅವರನ್ನು 1,43,709 ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿದ್ದರು. ಇದಾದ ಬಳಿಕ ಕಟೀಲ್‌ ಮುಂದಿನ ಸತತ ಎರಡು ಅವಧಿಗಳಲ್ಲೂ ಸಂಸದರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...