ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನಾ ಕಾರ್ಯಕ್ರಮ: ಪತ್ರಕರ್ತರಿಗಿಲ್ಲ ವರದಿ ಮಾಡುವ ಅವಕಾಶ!

Date:

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಈ ಕಾರ್ಯಕ್ರಮವನ್ನು ಸ್ಥಳದಲ್ಲೇ ವರದಿ ಮಾಡಲು ಮಾಧ್ಯಮಗಳಿಗೆ ಅವಕಾಶ ನೀಡಲಾಗಿಲ್ಲ.

ಈ ಬಗ್ಗೆ ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ. “ಆಗಸ್ಟ್ 10ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆ ಮಾಡುವ ಕಾರ್ಯಕ್ರಮಕ್ಕೆ ಎಸ್‌ಪಿಜಿ ನಿಯಮಾವಳಿ ಪ್ರಕಾರ, ಭದ್ರತಾ ಕಾರಣಗಳಿಂದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ನೇರವಾಗಿ ಸ್ಥಳದಲ್ಲಿ ಕಾರ್ಯಕ್ರಮವನ್ನು ವರದಿ ಮಾಡಲು ಅವಕಾಶವಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ: ವೇದಿಕೆಯಲ್ಲಿ ವಿಪಕ್ಷ ನಾಯಕ ಅಶೋಕ್‌ಗಿಲ್ಲ ಆಹ್ವಾನ, ಪ್ರಿಯಾಂಕ್ ವ್ಯಂಗ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ ಉದ್ಘಾಟನೆಯ ನೇರ ಪ್ರಸಾರದ ವಿಡಿಯೋ ಲಿಂಕ್ ಅನ್ನು ಮಾಧ್ಯಮಕ್ಕೆ ದೂರದರ್ಶನದ ಮೂಲಕ ಒದಗಿಸಲಾಗುತ್ತದೆ. ಸಂಬಂಧಿತ ಛಾಯಾಚಿತ್ರಗಳನ್ನು ಸಹ ಮಾಧ್ಯಮಗಳಿಗೆ ಲಭ್ಯವಿರಿಸಲಾಗುತ್ತದೆ. ನಿಮ್ಮ ಸಹಕಾರವನ್ನು ವಿನಂತಿಸುತ್ತೇವೆ” ಎಂದು ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳಿಗೆ ಇಷ್ಟೊಂದು ಭಯ ಪಡುತ್ತಾರೆ ಎಂದು ತಿಳಿದಿರಲಿಲ್ಲ ಎಂದು ನೆಟ್ಟಿಗರು ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಈಗಾಗಲೇ ಮೂರು ಬಾರಿ ಪ್ರಧಾನಿಯಾದರೂ ಒಂದು ಬಾರಿಯೂ ಪತ್ರಿಕಾಗೋಷ್ಠಿ ನಡೆಸದೆ ಟೀಕೆಗೆ ಗುರಿಯಾಗಿರುವ ಪ್ರಧಾನಿ ಈಗ ಬೆಂಗಳೂರಿನಲ್ಲಿ ಮಾಧ್ಯಮಗಳಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಲಾಗುತ್ತಿದೆ. “ನಮಗೆ ಪ್ರಶ್ನೆ ಕೇಳಿ ಅಭ್ಯಾಸ. ಅವರಿಗೆ(ಪ್ರಧಾನಿ ನರೇಂದ್ರ ಮೋದಿ) ಪ್ರಶ್ನೆ ಕೇಳಿಸಿಕೊಂಡು ಅಭ್ಯಾಸ ಇಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...