ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆ: ಬಿಜೆಪಿಗೆ ಭಾರೀ ಮುಖಭಂಗ; ಮೈತ್ರಿಗೆ ಭರ್ಜರಿ ಗೆಲುವು

Date:

ಕೇಂದ್ರ ಸರ್ಕಾರವು ಆರ್ಟಿಕಲ್ 370 ರದ್ದು ಮಾಡಿದ ಬಳಿಕ ನಡೆದ ಮೊದಲ ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ ಜೆಕೆಎನ್‌ಸಿ-ಕಾಂಗ್ರೆಸ್ ಮೈತ್ರಿಯು ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ ಭರ್ಜರಿ ಗೆಲುವು ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಡಾಕ್ ಹಿಲ್ ಕೌನ್ಸಿಲ್‌ನ 26 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 22 ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ ಗೆದ್ದುಕೊಂಡಿದೆ. ಇತ್ತ ಬಿಜೆಪಿ ಕೇವಲ ಎರಡು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇಬ್ಬರು ಪಕ್ಷೇತರರು ಕೂಡ ಗೆದ್ದಿದ್ದಾರೆ.

ಜಮ್ಮು, ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಒಕ್ಕೂಟಗಳಾಗಿ ವಿಭಜಿಸಿದ ನಂತರ ಕಾರ್ಗಿಲ್‌ನಲ್ಲಿ ನಡೆದ ಮೊದಲ ಸ್ಥಳೀಯ ಚುನಾವಣೆ ಇದಾಗಿತ್ತು. ಆಗಸ್ಟ್ 05, 2019ರಂದು ಲಡಾಖ್‌ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಡಿಸಲಾಗಿತ್ತು.

ಅಕ್ಟೋಬರ್ 4ರಂದು 26 ಸ್ಥಾನಗಳಿಗೆ ಮತದಾನ ನಡೆದಿತ್ತು. ಕೌನ್ಸಿಲ್‌ನಲ್ಲಿ ಒಟ್ಟು 30 ಸ್ಥಾನಗಳಿದ್ದರೂ ಉಳಿದ ನಾಲ್ಕು ಕೌನ್ಸಿಲರ್‌ಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಚುನಾವಣೆ ನಡೆದ 26 ಸ್ಥಾನಗಳಿಗೆ ಒಟ್ಟು 85 ಅಭ್ಯರ್ಥಿಗಳು ಕಣದಲ್ಲಿದ್ದರು.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್-370 ರದ್ದು ಮಾಡಿದ ಬಳಿಕ ಮಹತ್ತರ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಲಡಾಖ್ ಪ್ರದೇಶದಲ್ಲಿ ಬಿಜೆಪಿ ಪ್ರಯತ್ನಗಳಿಗೆ ಮತದಾರರಿಂದ ಮನ್ನಣೆ ಸಿಕ್ಕಿಲ್ಲ. ಬಿಜೆಪಿಗೆ ಕೇವಲ 2 ಸ್ಥಾನ ನೀಡಿರುವ ಲಡಾಕ್ ಮತದಾರರು, ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್‌ಗೆ 22 ಸ್ಥಾನ ನೀಡಿದ್ದಾರೆ. ಈ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 12 ಸ್ಥಾನ ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 10 ಸ್ಥಾನ ಗೆದ್ದುಕೊಂಡಿದೆ.

ಲಡಾಖ್‌ನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದು ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಗೆ ಸಿಕ್ಕ ಗೆಲುವು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಗೆ ಸಿಕ್ಕಿ ಈ ಭರ್ಜರಿ ಗೆಲುವು ಕೇಂದ್ರದ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಜೆಕೆಎನ್‌ಸಿ ಮುಖ್ಯಸ್ಥ ಉಮರ್ ಅಬ್ದುಲ್ಲಾ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...