ರಾಜ್ಯ ಅಗ್ನಿಶಾಮಕ ದಳಕ್ಕೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ: ಗೃಹ ಸಚಿವ ಪರಮೇಶ್ವರ್

Date:

ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿಯಲ್ಲಿ ತೆರೆದಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ತಿಳಿಸಿದರು.

ಕೋರಮಂಗಲದ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಮಂಗಳವಾರ ನಡೆದ ‘ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಇಲಾಖೆಯ ಕೆಲಸ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದೀರಿ. ಭವಿಷ್ಯ ಉಜ್ವಲವಾಗಿರಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್‌ವರೆಗೆ ನೀರು ತಲುಪಿಸಬಹುದಾದ ಏರಿಯಲ್ ಲ್ಯಾಡರ್ ಅಳವಡಿಸಿಕೊಳ್ಳಲಾಗಿದೆ. ಬಹುತೇಕ ರಾಜ್ಯಗಳಲ್ಲಿ ಇದು ಇಲ್ಲ. ಅಲ್ಲದೇ, ಮೊದಲ ಬಾರಿಗೆ ಇಲಾಖೆಯ ವಾಹನಗಳಿಗೆ ಪೆಟ್ರೋಲ್ ಕಾರ್ಡ್ ಸವಲತ್ತು ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“ರಾಜ್ಯದ ಅಗ್ನಿಶಾಮಕ ದಳ ಎಂದರೆ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದಕ್ಕೆ ಕಾರಣರಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ. ಹೊಸದಾಗಿ ಇಲಾಖೆಗೆ ನೇಮಕ ಹೊಂದಿರುವ ಸಿಬ್ಬಂದಿಗಳಿಗೆ ತಮಗೆ ತರಬೇತಿ ನೀಡಲಾಗಿದೆ. ಮುಂದಿನ ಮುವತ್ತೈದು ವರ್ಷ ನಿಮ್ಮ ಜೊತೆಗೆ ಇರುತ್ತದೆ. ಕರ್ತವ್ಯದಲ್ಲಿ ಶಿಸ್ತು ಪಾಲನೆ ಮೂಲಕ ಇಲಾಖೆಯ ಕೀರ್ತಿ ಹೆಚ್ಚಿಸಬೇಕು” ಎಂದರು.

“ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾವುದೇ ಧರ್ಮ, ರಾಜಕೀಯ, ವ್ಯಕ್ತಿಗೆ ಕೆಲಸ ಮಾಡುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಿಮಗೆ ಪ್ರಮಾಣ ಬೋದನೆ ಮಾಡಲಾಗಿದೆ‌. ಅದೇ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದದವು ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಗೆ ನೇಮಕಾತಿ ಹೊಂದುತ್ತಿದ್ದಾರೆ. ಇದು ಸಂತೋಷದಾಯಕ ವಿಚಾರ. ಈ ಭಾಗದವರು ಸಹ ನೇಮಕ ಹೊಂದಲು ಆಸಕ್ತಿ ತೋರಬೇಕು” ಎಂದು ಹೇಳಿದರು.

“ಬಿಜಾಪುರದ ಇಂಡಿ ತಾಲ್ಲೂಕಿನ ಲಚ್ಚಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಸಾತ್ವಿಕ್ ಎಂಬ ಮಗುವನ್ನು ನಮ್ಮ ಸಿಬ್ಬಂದಿ ನಿರಂತರ ಕಾರ್ಯಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ್ದಾರೆ ಎಂಬುದನ್ನು ಕೇಳಲು ಸುಲಭ. ಆದರೆ ಜೀವದ ಹಂಗು ತೊರೆದು, ತಮ್ಮ ಕುಟುಂಬವನ್ನು ಜ್ಞಾಪಿಸಿಕೊಳ್ಳದೆ ಸತತ 19 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸುವೆ” ಎಂದರು.

“ರಾಮೇಶ್ವರ ಕೆಫೆ ಸ್ಪೋಟದ ಸ್ಥಳ ಪರಿಶೀಲನೆಗೆ ಹೋಗಿದ್ದೆ. ಕೋರಮಂಗಲದ ಪಬ್‌ನಲ್ಲಿ 16 ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಭಯದಿಂದ ಕಟ್ಟಡದ ಮೇಲಿಂದ ಹಾರಿದ್ದ ವ್ಯಕ್ತಿಯನ್ನು ರಕ್ಷಿಸಿ ಪ್ರಾಣ ಉಳಿಸಿದರು. ಮಡಿಕೇರಿಯಲ್ಲಿ ಭೂಕುಸಿತ ಸಂಭವಿಸಿ ಹತ್ತಾರು ಜನ ಪ್ರಾಣ ಕಳೆದುಕೊಂಡರು. ಎಸ್‌ಡಿಆರ್‌ಎಫ್‌ನವರು ಯಾವುದೇ ಭಯವಿಲ್ಲದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ್ದಾರೆ. ಸಿಬ್ಬಂದಿಗಳು ಕಠಿಣ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸಿರುವುದನ್ನು ಗೃಹ ಸಚಿವನಾಗಿ ಹತ್ತಿರದಿಂದ ನೋಡಿದ್ದೆನೆ‌” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...