ಇನ್ನು ಮುಂದೆ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್’: ಎನ್‌ಸಿಇಆರ್‌ಟಿ

Date:

ಜಿ20 ಶೃಂಗಸಭೆಯ ವೇಳೆ ಚರ್ಚೆಗೊಳಗಾಗಿದ್ದ ದೇಶದ ಹೆಸರು ಬದಲಾವಣೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ದೇಶದ ಹೆಸರನ್ನು ‘ಇಂಡಿಯಾ’ ಅಥವಾ ‘ಭಾರತ್’ ಎಂದು ಬಳಸುವ ಚರ್ಚೆಗಳ ನಡುವೆಯೇ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಶಾಲಾ ಪಠ್ಯಕ್ರಮಗಳಲ್ಲಿ ಇಂಡಿಯಾ ಬದಲು ಭಾರತ್ ಅನ್ನು ಬಳಸುವ ನಿರ್ಧಾರಕ್ಕೆ ಉನ್ನತ ಮಟ್ಟದ ಸಮಿತಿಯು ಅನುಮೋದನೆ ನೀಡಿದೆ.

‘ಎನ್‌ಸಿಇಆರ್‌ಟಿ ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು, ಮುಂದಿನ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ಇನ್ನು ಮುಂದೆ ‘ಭಾರತ್’ ಎಂದು ಬದಲಿಸಲು ಮತ್ತು ಪ್ರಾಚೀನ ಇತಿಹಾಸದ ಬದಲಿಗೆ ‘ಶಾಸ್ತ್ರೀಯ ಇತಿಹಾಸ(Classical History)’ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ’ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ಬುಧವಾರ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ’ ಎಂದು ಐಸಾಕ್ ಹೇಳಿದ್ದಾರೆ.

“ಇಂಡಿಯಾ ಎಂಬ ಪದವನ್ನು ಈಸ್ಟ್ ಇಂಡಿಯಾ ಕಂಪನಿ ಸ್ಥಾಪನೆಯ ನಂತರ ಮತ್ತು 1757ರಲ್ಲಿ ಪ್ಲಾಸಿ ಯುದ್ಧದ ನಂತರ ಮಾತ್ರ ಬಳಸಲಾರಂಭಿಸಿತು. ಆದ್ದರಿಂದ, ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ಭಾರತ್ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಶಿಫಾರಸು ಮಾಡಿದೆ ಎಂದು ಐಸಾಕ್ ಹೇಳಿಕೆ ನೀಡಿದ್ದಾರೆ.

ಈಗ ಅನುಮೋದನೆ ನೀಡಿರುವ ಏಳು ಮಂದಿ ಸದಸ್ಯರ ಉನ್ನತ ಮಟ್ಟದ ಸಮಿತಿಯ ಸದಸ್ಯರಲ್ಲಿ ಗಾಯಕ ಶಂಕರ್‌ ಮಹದೇವ, ಇನ್ಫೋಸಿಸ್‌ ಫೌಂಡೇಶನ್‌ನ ಸುಧಾ ಮೂರ್ತಿ, ಆರೆಸ್ಸೆಸ್‌ ಸಂಯೋಜಿತ ಸಂಸ್ಕೃತ ಭಾರತಿಯ ಚಮು ಕೃಷ್ಣ ಶಾಸ್ತ್ರಿ, ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್‌ ದೆಬ್ರಾಯ್‌ ಮುಂತಾದವರು ಇದ್ದಾರೆ.

‘ಜಿ 20’ ಗಣ್ಯರಿಗೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಔತಣಕೂಟಕ್ಕೆ ನೀಡಲಾಗಿದ್ದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ್‌’ ಎಂದು ಉಲ್ಲೇಖಿಸಲಾಗಿತ್ತು. ಈ ಆಹ್ವಾನ ಪತ್ರಿಕೆಯ ಫೋಟೋ ವೈರಲ್‌ ಆದ ಬೆನ್ನಲ್ಲೇ, ಕೇಂದ್ರ ಸರ್ಕಾರವು ದೇಶದ ಹೆಸರನ್ನು ‘ಭಾರತ’ ಎಂದು ಬದಲಿಸಲು ಹೊರಟಿದೆ ಎಂಬ ವಿವಾದ ಭುಗಿಲೆದ್ದಿತ್ತು.

ಅಲ್ಲದೇ, ಆ ಬಳಿಕ ನವದೆಹಲಿಯಲ್ಲಿ ನಡೆದ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮಫಲಕದಲ್ಲಿ ‘ಇಂಡಿಯಾ’ದ ಬದಲಿಗೆ ‘ಭಾರತ್’ ಎಂದು ಬರೆಯಲಾಗಿತ್ತು. ಇದು ವಿವಾದದ ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿತ್ತು.

ಇತ್ತ ವಿರೋಧ ಪಕ್ಷದಳ ಮೈತ್ರಿಕೂಟಗಳು ಯುಪಿಎ ಬದಲಾಗಿ ‘ಐಎನ್‌ಡಿಐಎ'(INDIA) ಎಂದು ಹೆಸರು ಬದಲಾವಣೆ ಮಾಡಿದ ಕಾರಣಕ್ಕೆ ಭಯಪಟ್ಟುಕೊಂಡು ಪ್ರಧಾನಿ ದೇಶದ ಹೆಸರು ಬದಲಾವಣೆಗೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಸೇರಿದಂತೆ ಮೈತ್ರಿಕೂಟದ ನಾಯಕರು ಲೇವಡಿ ಮಾಡಿದ್ದರು.

ದೇಶದ ಹೆಸರನ್ನು ‘ಭಾರತ’ ಎಂದು ಅಧಿಕೃತಗೊಳಿಸಿ, ಸಂವಿಧಾನದಿಂದ ‘ಇಂಡಿಯಾ’ ಪದವನ್ನು ಕೈಬಿಡುವ ಯಾವುದೇ ಉದ್ದೇಶವಿಲ್ಲ. ಈ ಕುರಿತು ಬಂದ ವರದಿಗಳು ಕೇವಲ ಊಹಾಪೋಹವಷ್ಟೇ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಸ್ಪಷ್ಟಪಡಿಸಿದ್ದರು. ಈಗ ಈ ವಿವಾದ ಎನ್‌ಸಿಇಆರ್‌ಟಿಯ ನಿರ್ಧಾರದಿಂದ ಮತ್ತೊಮ್ಮೆ ಭುಗಿಲೇಳುವ ಲಕ್ಷಣಗಳು ಗೋಚರಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...