ಏಕನಾಥ್‌ ಶಿಂಧೆಗೆ ಇಂದಿನಿಂದ ಕಷ್ಟದ ದಿನಗಳು ಶುರು: ಸಂಜಯ್ ರಾವುತ್

Date:

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಮಾಣ ವಚನ ಸ್ವೀಕರಿಸಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಕಷ್ಟದ ದಿನಗಳು ಶುರುವಾಗಿದ್ದು, ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಪ್ರಕ್ರಿಯೆಯ ಆರಂಭ ಎಂದು ಶಿವಸೇನಾ (ಯುಟಿಬಿ) ರಾಜ್ಯಸಭೆಯ ಸದಸ್ಯ ಸಂಜಯ್ ರಾವುತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಗಳನ್ನು ಒಡೆದು ಸರ್ಕಾರ ರಚಿಸುವ ಕುತಂತ್ರವನ್ನು ಮಹಾರಾಷ್ಟ್ರ ಜನರು ಧೀರ್ಘ ಕಾಲದವರೆಗೆ ಸಹಿಸುವುದಿಲ್ಲ. ರಾಜ್ಯದ ರಾಜಕೀಯವನ್ನು ಸಂಪೂರ್ಣವಾಗಿ ಹಾಳುಮಾಡಬೇಕೆಂದು ಕೆಲವರು ದೃಢವಾಗಿ ನಿರ್ಧರಿಸಿದ್ದಾರೆ. ಆದರೆ ಹಾಳು ಮಾಡುವವರೆ ತಾವೇ ಮುಳುಗುತ್ತಾರೆಂದು ತಿಳಿದಿಲ್ಲ” ಎಂದು ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದರು.

“ನಾನು ಶರದ್ ಪವಾರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು“ನಾನು ಬಲಶಾಲಿ. ನಮಗೆ ಜನರ ಬೆಂಬಲವಿದೆ. ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಮರುನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರಾಜ್ಯದ ರಾಜಕೀಯವನ್ನು ಸಂಪೂರ್ಣವಾಗಿ ಹಾಳುಮಾಡಬೇಕೆಂದು ಕೆಲವರು ದೃಢವಾಗಿ ನಿರ್ಧರಿಸಿದ್ದಾರೆ. ಅವರ ಆಯ್ಕೆಯ ಮಾರ್ಗದಲ್ಲಿಅವರು ಸಾಗಲಿ’ಎಂದು ಅಜಿತ್ ಪವಾರ್, ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಬಿಜೆಪಿಯನ್ನು ಗಮನದಲ್ಲಿರಿಸಿಕೊಂಡು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಂಡಾಯ ನನಗೆ ಹೊಸದಲ್ಲ, ಮತ್ತೆ ಪಕ್ಷ ಸಂಘಟಿಸುತ್ತೇನೆ; ಅಜಿತ್‌ ನಡೆಗೆ ಶರದ್‌ ಪವಾರ್ ಪ್ರತಿಕ್ರಿಯೆ

ಎನ್‌ಸಿಪಿ ಏಕನಾಥ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್‌ಸಿಪಿಯ ಒಂಭತ್ತು ಶಾಸಕರಿಗೆ ಪಕ್ಷದಿಂದ ಅಧಿಕೃತ ಬೆಂಬಲ ಇಲ್ಲ ಎಂದು ಎನ್‌ಸಿಪಿ ವಕ್ತಾರ ಮಹೇಶ್ ತಾಪಸೆ ಹೇಳಿದ್ದಾರೆ.

ರಾಜ್ಯದ ಜನತೆ ಪಕ್ಷದ ರಾಷ್ಟ್ರೀಯ ನಾಯಕ ಶರದ್ ಪವಾರ್ ಅವರ ಜೊತೆಗಿದ್ದಾರೆ. ಪ್ರಮಾಣ ವಚನ ಸಮಾರಂಭವು ‘ಆಪರೇಷನ್ ಕಮಲ’ದ ಭಾಗವಷ್ಟೇ. ಪ್ರಮಾಣ ವಚನ ಸ್ವೀಕರಿಸಿದ್ದು ಶಾಸಕರ ಸ್ವಂತ ನಿರ್ಧಾರವೇ ಹೊರತು ಎನ್‌ಸಿಪಿಯ ನಿರ್ಧಾರವಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...