ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

Date:

ಮಹಾರಾಷ್ಟ್ರ ರಾಜಕೀಯಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳು ಎರಡನೇ ದಿನವೂ ಮುಂದುವರೆದಿದ್ದು, ಎನ್‌ಸಿಪಿಯಿಂದ ಬಂಡೆದ್ದ ನಾಯಕರಲ್ಲಿ ಸಂಸದರಾದ ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಅನರ್ಹಗೊಳಿಸಲಾಗಿದೆ.

ಹಾಗೆಯೇ ಇವರಿಬ್ಬರು ಸಂಸದರನ್ನು ಒಳಗೊಂಡು 9 ಶಾಸಕರನ್ನು ಅನರ್ಹಗೊಳಿಸುವಂತೆ ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ.

ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದ್ದು, ಮೂವರೂ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ಎನ್‌ಸಿಪಿಯ ಇಬ್ಬರು ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರು ನಮ್ಮ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 9 ಶಾಸಕರ ಪ್ರಮಾಣ ವಚನ ಸಮಾರಂಭವನ್ನು ಸುಗಮಗೊಳಿಸುವ ಮತ್ತು ಮುನ್ನಡೆಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಲು ನಾನು ನಿಮಗೆ ಅತ್ಯಂತ ತುರ್ತಾಗಿ ಪತ್ರ ಬರೆಯುತ್ತಿದ್ದೇನೆ ಎಂದು ಎನ್‌ಸಿಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಸುಪ್ರಿಯಾ ಸುಳೆ ಅವರು ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ.

ಎನ್‌ಸಿಪಿಯ ಶಿಸ್ತು ಸಮಿತಿಯು ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಳ್ಳಲು ಅಜಿತ್ ಪವಾರ್ ಅವರನ್ನು ಬೆಂಬಲಿಸಿದ 9 ಶಾಸಕರನ್ನು ಅನರ್ಹಗೊಳಿಸುವಂತೆ ಕರೆ ನೀಡಿದೆ. ಎನ್‌ಸಿಪಿಯ 9 ಶಾಸಕರನ್ನು ತಕ್ಷಣ ಅನರ್ಹಗೊಳಿಸಬೇಕು. ಅವರನ್ನು ಸದಸ್ಯರಾಗಿ ಮುಂದುವರಿಯಲು ಅವಕಾಶ ನೀಡಿದರೆ, ಅವರು ಪಕ್ಷದ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದನ್ನು ಮುಂದುವರೆಸುವ ಸಾಧ್ಯತೆಯಿದೆ ಎಂದು ಎನ್‌ಸಿಪಿಯ ಶಿಸ್ತು ಸಮಿತಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...