2 ವರ್ಷದಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನ ಸ್ಪರ್ಧೆಗೆ ಎನ್‌ಡಿಎ ನಿರ್ಧಾರ

Date:

ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಾಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಎನ್‌ಡಿಎ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ. ಒಗ್ಗಟ್ಟಿನ ಸ್ಪರ್ಧೆಯ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದೇ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ NDAಗೆ ಮೊದಲ ಸವಾಲಾಗಿರಲಿದೆ. ಬಿಹಾರದಲ್ಲಿ ಪ್ರಸ್ತುತ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿದೆ. ಅಲ್ಲಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಅನ್ನು ಮುನ್ನಡೆಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮುಂದಿನ ಎರಡು ವರ್ಷಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ಉತ್ತರ ಪ್ರದೇಶ ಹಾಗೂ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಎಲ್ಲ ಚುನಾವಣೆಗಳಲ್ಲಿಯೂ ಎನ್‌ಡಿಎ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ವರದಿಯಾಗಿದೆ.

ಸಭೆಯಲ್ಲಿ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಇದ್ದರು.

ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷೆ ಜೆ ಪಿ ನಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...