ಬಿಹಾರ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾನುವಾರ ತನ್ನ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ ಯುನೈಟೆಡ್(ಜೆಡಿಯು) 243 ಸದಸ್ಯ ಬಲದ ಸದನದಲ್ಲಿ ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಕೇಂದ್ರ ಸಚಿವ ಮತ್ತು ಬಿಜೆಪಿಯ ಬಿಹಾರ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೀಟು ಹಂಚಿಕೆ ಸೂತ್ರದ ಪ್ರಕಾರ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)ಗೆ 29 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?
ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
“ಸೀಟು ಹಂಚಿಕೆ ಪ್ರಕ್ರಿಯೆಯನ್ನು ‘ಸೌಹಾರ್ದಯುತವಾಗಿ’ ನಡೆಸಲಾಗಿದೆ ಮತ್ತು ಎಲ್ಲಾ ಎನ್‌ಡಿಎ ಪಾಲುದಾರರು ಫಲಿತಾಂಶದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಎಲ್ಲಾ ಎನ್‌ಡಿಎ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಇದನ್ನು ಸಂತೋಷದಿಂದ ಸ್ವಾಗತಿಸಿದ್ದಾರೆ. ಬಿಹಾರ ಮತ್ತೊಂದು ಎನ್‌ಡಿಎ ಸರ್ಕಾರಕ್ಕಾಗಿ ಸಿದ್ಧವಾಗಿದೆ” ಎಂದು ಧರ್ಮೇಂದ್ರ ಪ್ರಧಾನ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
हम एनडीए के साथियों ने सौहार्दपूर्ण वातावरण में सीटों का वितरण पूर्ण किया।
— Dharmendra Pradhan (@dpradhanbjp) October 12, 2025
BJP – 101
JDU – 101
LJP (R) – 29
RLM – 06
HAM – 06
एनडीए के सभी दलों के कार्यकर्ता और नेता इसका हर्षपूर्वक स्वागत करते हैं।
बिहार है तैयार,
फिर से एनडीए सरकार।#NDA4Bihar ✌️
ಬಿಜೆಪಿ ನಾಯಕತ್ವ ಮತ್ತು ಅದರ ಸಣ್ಣ ಮಿತ್ರಪಕ್ಷಗಳೊಂದಿಗೆ ದೀರ್ಘ ಮಾತುಕತೆಯ ನಂತರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ. ಜೆಡಿ(ಯು) ಈ ಹಿಂದೆ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೂ ಎಲ್‌ಜೆಪಿ(ಆರ್‌ವಿ), ಎಚ್‌ಎಎಂ(ಎಸ್) ಮತ್ತು ಆರ್‌ಎಲ್‌ಎಂನಂತಹ ಪಕ್ಷಗಳ ನಡುವೆ ಒಪ್ಪಂದ ಅಂತಿಮವಾಗಿರಲಿಲ್ಲ. ಆಗಾಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದವು.
2020ರ ವಿಧಾನಸಭಾ ಚುನಾವಣೆಯಲ್ಲಿ, ಜೆಡಿ(ಯು) 115 ಸ್ಥಾನಗಳಲ್ಲಿ ಮತ್ತು ಬಿಜೆಪಿ 110 ಸ್ಥಾನಗಳಲ್ಲಿ ಸ್ಪರ್ಧಿಸಿತು, ಎಲ್‌ಜೆಪಿ ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಇದೇ ಮೊದಲ ಬಾರಿಗೆ ಜೆಡಿಯು, ಬಿಜೆಪಿ ಸಮಾನ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.





