ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಖರ್ಗೆ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ‘ಬೈ ಮಿಸ್ಟೇಕ್’ ರಚನೆಯಾಗಿದೆ. ಆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ‘ಇದು ಹತಾಶೆಯ ಹೇಳಿಕೆ’ ಎಂದಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಖರ್ಗೆ, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಇದು ಯಾವಾಗ ಬೇಕಾದರೂ ಪತನವಾಗಬಹುದು” ಎಂದು ಹೇಳಿದರು.

“ದೇಶವನ್ನು ಬಲಪಡಿಸಲು ವಿಪಕ್ಷಗಳ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಸರ್ಕಾರ ಮುಂದುವರೆಯಬೇಕು. ದೇಶವನ್ನು ಬಲಪಡಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಬಯಸುತ್ತೇವೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಮಾತ್ರ ಗೆದಿದ್ದು, ಜೆಡಿಯು, ಜೆಡಿಎಸ್‌, ಟಿಡಿಪಿ ಹಾಗೂ ಇತರ ಪಕ್ಷಗಳ ಬೆಂಬಲದಿಂದ ಮೋದಿ ಸರ್ಕಾರ ರಚಿಸಿದ್ದಾರೆ. ಅವರ ಸರ್ಕಾರ ಅಭದ್ರವಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್, “ಖರ್ಗೆ ಹತಾಶೆಯಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರು ಚುನಾವಣೆಯ ಸಮಯದಲ್ಲಿ ‘ಇಂಡಿಯಾ’ ಮೈತ್ರಿಕೂಟ 25 ಸ್ಥಾನ ಗೆಲ್ಲುವ ಬಗ್ಗೆ ಮಾತನಾಡಿದ್ದರು. ಆದರೆ, ಅವರು 230 ಸ್ಥಾನಗಳಿಗಿಂತ ಹೆಚ್ಚು ಗಳಿಸಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

“ಕಾಂಗ್ರೆಸ್‌ಗೆ ತನ್ನದೇ ಆದ ಸಮಸ್ಯೆಗಳಿವೆ. ಎಐಸಿಸಿ ಅಧ್ಯಕ್ಷರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ತಮ್ಮ ನಿಲುವಿನ ಅರಿವಿದ್ದರೂ, ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಸಂಸದ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...