ಎನ್‌ಡಿಎ ಸರ್ಕಾರ ಬಿಹಾರದ ಜನರ ಮೇಲೆ ಹೊರೆ, 15 ವರ್ಷ ಹಳೆಯ ವಾಹನದಂತೆ ಸ್ಕ್ರಾಪ್ ಮಾಡಬೇಕು: ತೇಜಸ್ವಿ ಯಾದವ್

Date:

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶನಿವಾರ ಟೀಕಿಸಿದ್ದಾರೆ. “ರಾಜ್ಯದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು 15 ವರ್ಷಗಳಷ್ಟು ಹಳೆಯ ವಾಹನಗಳನ್ನು ಹೇಗೆ ಸ್ಕ್ರಾಪ್ (ರದ್ದಿ) ಮಾಡಲಾಯಿತೋ, ಹಾಗೆಯೇ ಬಿಹಾರದ ಜನರ ಮೇಲೆ ಹೊರೆಯಾಗಿರುವ ಎರಡು ದಶಕದ ಎನ್‌ಡಿಎ ಸರ್ಕಾರವನ್ನು ಸ್ಕ್ರಾಪ್ ಮಾಡಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ 20 ವರ್ಷ ಹಳೆಯ ಎನ್‌ಡಿಎ ಸರ್ಕಾರವು ದುರ್ಬಲ ವಾಹನದಂತೆ ಆಗಿದೆ. ಬಿಹಾರದಾದ್ಯಂತ 15 ವರ್ಷಗಳಷ್ಟು ಹಳೆಯದಾದ ವಾಹನವನ್ನು ನಿಷೇಧಿಸಲಾಗಿದೆ. ಹಳೆಯ ವಾಹನಗಳು ಹೆಚ್ಚು ಹೊಗೆ ಉಗುಳುತ್ತದೆ, ಇದರಿಂದಾಗಿ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಇದು ಜನರಿಗೆ ಅಪಾಯಕಾರಿ” ಎಂದು ಬಿಹಾರ ಸರ್ಕಾರವನ್ನು ಹಳೆಯ ವಾಹನಕ್ಕೆ ಹೋಲಿಸಿದ್ದಾರೆ.

ಇದನ್ನು ಓದಿದ್ದೀರಾ? ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಳೆಯ ವಾಹನ ನಿಷೇಧಿಸುವಾಗ 20 ವರ್ಷ ಹಳೆಯದಾದ ದುರ್ಬಲ ಎನ್‌ಡಿಎ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸಲು ಯಾಕೆ ಅವಕಾಶ ನೀಡಬೇಕು? ಈ ಸರ್ಕಾರವು ಬಿಹಾರದ ಜನರ ಮೇಲೆ ಹೊರೆಯಾಗಿದೆ. ಈ ಸರ್ಕಾರವನ್ನು ಬದಲಾವಣೆ ಮಾಡಬೇಕು” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬಿಹಾರ ವಿಪಕ್ಷ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

“ಕಳೆದ 20 ವರ್ಷಗಳ ಅವಧಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಿಹಾರದಲ್ಲಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಅಪರಾಧ ಮತ್ತು ವಲಸೆ ಎಂಬ ಮಾರಕ ಮಾಲಿನ್ಯವನ್ನು ಹರಡಿದೆ” ಎಂದು ತೇಜಸ್ವಿ ಟೀಕಿಸಿದ್ದಾರೆ.

2013ರಲ್ಲಿ ಬಿಜೆಪಿ ಜೊತೆ ಮೈತ್ರಿ ಹೊಂದಿದ್ದ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬಳಿಕ ಆರ್‌ಜೆಡಿ ಜೊತೆ ಮೈತ್ರಿ ಮಾಡಿಕೊಂಡರು. 2015ರಿಂದ 2017ರವರೆಗೆ ಆರ್‌ಜೆಡಿ ಜೊತೆ ಅಧಿಕಾರವನ್ನು ಹಂಚಿಕೊಂಡಿತ್ತು. 2017ರಲ್ಲಿ ಆರ್‌ಜೆಡಿ ಜೊತೆ ಮೈತ್ರಿ ತೊರೆದು ಮತ್ತೆ ಎನ್‌ಡಿಎ ಕೂಡ ಸೇರಿದರು. ಬಳಿಕ 2022ರ ಆಗಸ್ಟ್‌ನಲ್ಲಿ ಮತ್ತೆ ಆರ್‌ಜೆಡಿ ಮಹಾಘಟಬಂಧನ ಜೊತೆ ಮೈತ್ರಿ ಮಾಡಿಕೊಂಡರು. 2024ರಲ್ಲಿ ಮತ್ತೆ ಮಹಾಘಟಬಂಧನ ತೊರೆದು ಎನ್‌ಡಿಎ ಸೇರಿಕೊಂಡರು. ಹೀಗೆ ನಿರಂತರವಾಗಿ ಮೈತ್ರಿ ಬದಲಾಯಿಸಿಕೊಂಡ ನಿತೀಶ್ ಕುಮಾರ್ ಈಗ ಮತ್ತೆ ಯಾವಾಗ ಎನ್‌ಡಿಎ ಕೂಟ ತೊರೆಯುತ್ತಾರೆ ಎಂದು ಹೇಳಲಾಗದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...