ಬಿಹಾರ ಚುನಾವಣೆ ಗೆಲ್ಲಲು ಎನ್‌ಡಿಎಯಿಂದ ₹40,000 ಕೋಟಿ ಖರ್ಚು; ತೇಜಸ್ವಿ ಆರೋಪ: ಸುಪ್ರೀಂ ಮೆಟ್ಟಿಲೇರಿದ ಪ್ರಶಾಂತ್

Date:

ಮೂರು ತಿಂಗಳ ನಂತರ ಸೋಲು ಕಂಡ ಬಳಿಕ ಮೊದಲ ಬಾರಿಗೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮೌನ ಮುರಿದಿದ್ದು, 2025ರ ನವೆಂಬರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್ ಅನ್ನು ಸೋಲಿಸಲು ಎನ್‌ಡಿಎ 40,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ತೇಜಸ್ವಿ, “ಚುನಾವಣೆಗೆ ಮುನ್ನ ಎನ್‌ಡಿಎ ಸರ್ಕಾರವು 40,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಲೂ 1.4 ಕೋಟಿ ಮಹಿಳೆಯರಿಗೆ ತಲಾ 10,000 ರೂ.ಗಳನ್ನು ನೀಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜಾಪ್ರಭುತ್ವದಲ್ಲಿ ಜನರು ಸೋತಿದ್ದಾರೆ. ನೀವು ಪ್ರಜಾಪ್ರಭುತ್ವವನ್ನು ಭಯ ಮತ್ತು ಬೆದರಿಕೆಯ ಆಡಳಿತವನ್ನಾಗಿಸಿದ್ದೀರಿ” ಎಂದು ಬಿಜೆಪಿ ಆಡಳಿತವನ್ನು ಟೀಕಿಸಿದರು.

ಸುಪ್ರೀಂ ಮೆಟ್ಟಿಲೇರಿದ ಪ್ರಶಾಂತ್ ಕಿಶೋರ್

ಈ ನಡುವೆ ಚುನಾವಣಾ ತಂತ್ರಜ್ಞ, ರಾಜಕಾರಣಿ ಜನ್ ಸುರಾಜ್‌ನ ಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಇಂದು (ಫೆಬ್ರವರಿ 6) ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ ನಡೆಸಲಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದರೆ, ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 243 ಸದಸ್ಯ ಬಲದ ಸದನದಲ್ಲಿ ಕೇವಲ 35 ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ. ಪ್ರಶಾಂತ್ ಕಿಶೋರ್‌ನ ರಾಜಕೀಯ ಸಂಘಟನೆಯಾದ ಜನ್ ಸುರಾಜ್ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, ಎಲ್ಲೂ ಗೆದ್ದಿಲ್ಲ. ಚುನಾವಣಾ ಆಯೋಗ ತರಾತುರಿಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಬಳಿಕ ಚುನಾವಣೆ ನಡೆದು ಬಂದಿರುವ ಫಲಿತಾಂಶವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹಾಗೆಯೇ ಬಿಹಾರ ಸರ್ಕಾರವು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಹೆಸರಿನಲ್ಲಿ 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದೂ ಜನ್ ಸುರಾಜ್ ಪಕ್ಷ ದೂರಿದೆ. ಈ ಯೋಜನೆಯನ್ನು ಚುನಾವಣೆಯಲ್ಲಿ ಮತ ಪಡೆಯಲೆಂದೇ ಚುನಾವಣೆಗೂ ಮುನ್ನ ಜಾರಿಗೊಳಿಸಲಾಗಿದೆ. ಆದ್ದರಿಂದ, ಚುನಾವಣೆಗಳನ್ನು ರದ್ದುಗೊಳಿಸಿ ಹೊಸದಾಗಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯಲ್ಲಿ ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...