ಪಶ್ಚಿಮ ಬಂಗಾಳ | ಸುಮಾರು 14 ಲಕ್ಷ SIR ಫಾರ್ಮ್‌ಗಳು ಸಂಗ್ರಹಿಸಲು ಅರ್ಹವಲ್ಲ: ಚುನಾವಣಾ ಆಯೋಗ

Date:

ಪಶ್ಚಿಮ ಬಂಗಾಳದಲ್ಲಿ ಈವರೆಗೆ ಸುಮಾರು 14 ಲಕ್ಷ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಫಾರ್ಮ್‌ಗಳು ಸಂಗ್ರಹಿಸಲು ಅರ್ಹವಲ್ಲದ ಫಾರ್ಮ್‌ಗಳೆಂದು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಮತದಾರರು ಪತ್ತೆಯಾಗದಿರುವುದರಿಂದ, ನಕಲಿ ಉಲ್ಲೇಖ ಆಗಿರುವುದರಿಂದ, ಮೃತಪಟ್ಟಿರುವುದರಿಂದ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದರಿಂದ ಈ ಫಾರ್ಮ್‌ಗಳನ್ನು ‘ಸಂಗ್ರಹಿಸಲು ಅರ್ಹವಲ್ಲದ’ ಫಾರ್ಮ್‌ಗಳೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? SIR | ಕೆಲಸದ ಒತ್ತಡದಿಂದಾಗಿ 6 ರಾಜ್ಯಗಳಲ್ಲಿ 15 ಬಿಎಲ್‌ಒಗಳ ಸಾವು: ವಿಪಕ್ಷಗಳ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಗಳವಾರ ಮಧ್ಯಾಹ್ನದ ವೇಳೆಗೆ, ಸಂಗ್ರಹಿಸಲು ಅರ್ಹವಲ್ಲದ ಫಾರ್ಮ್‌ಗಳ ಸಂಖ್ಯೆ 13.92 ಲಕ್ಷ ಆಗಿದೆ. ಈ ಸಂಖ್ಯೆ ಪ್ರತಿದಿನವೂ ಏರುತ್ತಲೇ ಹೋಗುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಸೋಮವಾರ ಸಂಜೆ 10.33 ಸಂಗ್ರಹಿಸಲು ಅರ್ಹವಲ್ಲದ ಫಾರ್ಮ್‌ಗಳ ಸಂಖ್ಯೆಯನ್ನು ಗುರುತಿಸಲಾಗಿತ್ತು.

ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಫಾರ್ಮ್‌ಗಳನ್ನು ವಿತರಿಸುವಲ್ಲಿ ಮತ್ತು ಅಗತ್ಯ ವಿವರಗಳನ್ನು ಸಂಗ್ರಹಿಸುವಲ್ಲಿ ಸಕ್ರಿಯವಾಗಿ ತೊಡಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗಾಗಿ 80,600ಕ್ಕೂ ಹೆಚ್ಚು ಬಿಎಲ್‌ಒಗಳು, ಸುಮಾರು 8,000 ಮೇಲ್ವಿಚಾರಕರು, 3,000 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು 294 ಚುನಾವಣಾ ನೋಂದಣಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಹಾರದಲ್ಲಿ ಚುನಾವಣೆಗೂ ಮುನ್ನ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ 64 ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಪೈಕಿ ಬಹುತೇಕರು ಅರ್ಹರು. ಆದರೂ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ವಿಪಕ್ಷಗಳು ಆರೋಪಿಸುತ್ತಿದೆ. ಚುನಾವಣೆಗೂ ಮುನ್ನ ತರಾತುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಿರುವುದೂ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಈ ವಿರೋಧಗಳ ನಡುವೆಯೂ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದ್ದು ಈ ಪೈಕಿ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಮುಂದಿನ ವರ್ಷದಲ್ಲೇ ಚುನಾವಣೆ ನಡೆಯಲಿದೆ.

ಇಷ್ಟು ಮಾತ್ರವಲ್ಲದೆ ಈ ಪ್ರಕ್ರಿಯೆಯ ಒತ್ತಡದಿಂದಾಗಿ ಈಗಾಗಲೇ 15ರಷ್ಟು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಕೆಲವರು ಒತ್ತಡದಿಂದಾಗಿ ಹೃದಯಾಘಾತಕ್ಕೆ ಒಳಗಾಗಿದ್ದು, ಇನ್ನು ಕೆಲವರು ಒತ್ತಡ ಹೆಚ್ಚಾಗಿದೆ ಎಂದು ದೂರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶ, ಗುಜರಾತ್‌ನ ನಾಲ್ವರು, ಪಶ್ಚಿಮ ಬಂಗಾಳದ ಮೂವರು, ರಾಜಸ್ಥಾನದಲ್ಲಿ ಇಬ್ಬರು ಮತ್ತು ಕೇರಳ, ತಮಿಳುನಾಡಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...