ಮಂಜೂರಾತಿ ನೀಡಿರುವ ಟೆಂಡರ್‌ಗಳ ಕುರಿತು ತಿಂಗಳಲ್ಲಿ ಪರಿಶೀಲನೆ : ಸಚಿವ ಹೆಚ್‌.ಕೆ. ಪಾಟೀಲ್

Date:

ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಮುಗಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್ 13) ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ನಡೆಯಿತು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಪ್ರಮುಖ ನಿರ್ಣಯಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ. ಪಾಟೀಲ್, “ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್‌ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್ ಗಳನ್ನು ಆಹ್ವಾನಿಸಲಾಗಿದೆ. 19 ಪ್ರಸ್ತಾವನೆಗಳು ಪರಿಶೀಲನೆಯಲ್ಲಿದ್ದು, 18 ಪ್ರಸ್ತಾವನೆಗಳಿಗೆ ಕಾರ್ಯಾದೇಶ ನೀಡಲಾಗಿದೆ. 7 ಕಾಮಗಾರಿಗಳು ಮುಕ್ತಾಯವಾಗಿವೆ. 53 ಪ್ರಸ್ತಾವನೆಗಳು ಟೆಂಡರ್ ಕರೆಯಲು ಬಾಕಿ ಇವೆ. ಸಚಿವ ಸಂಪುಟ ಇವುಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಆಡಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲಾ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 25 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ” ಎಂದು ಸಚಿವರು ಮಾಹಿತಿ ನೀಡಿದರು.

HK PATIL 1

“ಕಾರ್ಮಿಕ ಇಲಾಖೆಯಲ್ಲಿ ಇಎಸ್‍ಐನಲ್ಲಿ ಗುತ್ತಿಗೆ ವೈದ್ಯರ ವಿಲೀನ ಮಾಡುವ ಬಗ್ಗೆ ಚರ್ಚೆಯಾಗಿ ಮುಂದೂಡಲಾಗಿದೆ. ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ” ಎಂದು ತಿಳಿಸಿದ ಸಚಿವ ಪಾಟೀಲ್, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ” ಎಂದು ತಿಳಿಸಿದರು.

“ಸಾರಿಗೆ ಇಲಾಖೆಯಲ್ಲಿ ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 112 ಪೂರ್ಣ ಕವಚ ನಿರ್ಮಿತ ಬಿಎಸ್, 4 ವೇಗದೂತ ಬಸ್ಸುಗಳನ್ನು 46.48 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಬಂದಿದ್ದ ಪ್ರಸ್ತಾವನೆಯನ್ನು ಸಚಿವ ಸಂಪುಟ ಒಪ್ಪಿದೆ. 62 ಹೊಸ ಬಸ್ಸುಗಳನ್ನು ಖರೀದಿಸಲು ಹಾಗೂ 50 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ವರ್ಗಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ” ಎಂದು ಮಾಹಿತಿ ನೀಡಿದರು.

“ಗಣಿಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಭಾರತ್ ಚಿನ್ನದ ಗಣಿ ಸಂಸ್ಥೆ, ಕೆ.ಜಿಎಫ್ ಅವರು ಪಡೆದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರುವ ಟೇಲಿಂಗ್ ಡಂಪ್ಸ್‌ಗಳಿಗೆ ಎಂ.ಎಂ.ಡಿ.ಆರ್ ಕಾಯ್ದೆಯ ಕಲಂ 17ರನ್ವಯ ಕೇಂದ್ರ ಸರ್ಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಇದ್ದು, ಹೆಚ್ಚಿನ ತಾಂತ್ರಿಕ ವಿವರಗಳು ಅಗತ್ಯವಿರುವುದರಿಂದ ಇದನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ” ಎಂದು ಸಚಿವ ಹೆಚ್‌.ಕೆ. ಪಾಟೀಲ್ ತಿಳಿಸಿದರು.

“ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಯ ಆಕರ್ಷಣೆಗಾಗಿ Knowledge Partner ಆಯ್ಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇ-ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕಾರ ಈಗಾಗಲೇ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಇಂಡಿಯಾ ಪ್ರೈ ಲಿ., ಇವರನ್ನು ಜಿಎಸ್‍ಟಿ ಒಳಗೊಂಡಂತೆ 21 ಕೋಟಿ ರೂ. ವೆಚ್ಚದಲ್ಲಿ Knowledge Partner ಆಗಿ ನೇಮಕ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ” ಎಂದು ತಿಳಿಸಿದರು.

“ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಡಿ ರಾಜ್ಯದಲ್ಲಿ ಕಾನೂನು ಮತ್ತು ನೀತಿಗೆ ಅನುಮೋದನೆ ನೀಡುವ ಬಗ್ಗೆ ಎರಡು ಮೂರು ವಿಚಾರಗಳಲ್ಲಿ ಬದಲಾವಣೆ ಅಗತ್ಯವನ್ನು ಮನಗಂಡು ಮುಂದೂಡಲಾಗಿದೆ. ಏಳನೇ ವೇತನ ಆಯೋಗದ ಬಗ್ಗೆ ಅಧಿಕೃತ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಯಾವುದೇ ನಿರ್ಣಯಗಳಾಗಿಲ್ಲ” ಎಂದು ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಪೋಕ್ಸೊ ಪ್ರಕರಣ | ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ ಪ್ರಕಟ; ಯಾವುದೇ ಕ್ಷಣದಲ್ಲಿ ಬಿಎಸ್‌ವೈ ಬಂಧನ

“ರಾಜ್ಯದ ಆಡಳಿತವನ್ನು ಹೆಚ್ಚು ಬಿಗಿಯಾಗಿ, ಪರಿಣಾಮಕಾರಿಯಾಗಿ, ಜನಸ್ನೇಹಿಯಾಗಿ ಮಾಡಬೇಕು, ವಿಳಂಬ ಆಗದ ಹಾಗೇ ಕೆಲಸಗಳಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ಹಾಗೂ ಮಾರ್ಗದರ್ಶನ ನೀಡಿದ್ದಾರೆ” ಎಂದು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ. ಪಾಟೀಲ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...