ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಕೇಂದ್ರ ಬಿಂದುಗಳು: ರಾಹುಲ್ ಗಾಂಧಿ

Date:

ನೀಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗ್ರೇಸ್‌ ಅಂಕ ಪಡೆದಿದ್ದ 1,500 ಅಭ್ಯರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲು ನಿರ್ಧರಿಸಲಾಗಿದೆ. ಅವ್ಯವಹಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಕೇಂದ್ರ ಬಿಂದುಗಳಾಗಿವೆ” ಎಂದು ಆರೋಪಿಸಿದ್ದಾರೆ.

ನೀಟ್ ಅವ್ಯವಹಾರದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ದೇಶದ ಯುವಜನರ ಪರವಾಗಿ ರಸ್ತೆಯಿಂದ ಸಂಸತ್‌ವರೆಗೆ ಧ್ವನಿ ಎತ್ತಲು ನಮ್ಮ ಪಕ್ಷ ಬದ್ದವಾಗಿದೆ. ನೀಟ್‌ನಲ್ಲಿ ಅವ್ಯಹಾರದ ಆರೋಪದ ಮೇಲೆ ಬಿಹಾರ, ಗುಜರಾತ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ಎಲ್ಲ ರಾಜ್ಯಗಳು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಾಗಿವೆ” ಎಂದು ಹೇಳಿದ್ದಾರೆ.

ನೀಟ್‌ ಅವ್ಯವಹಾರದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿದ್ದು, ಮೋದಿ ಮೌನದ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘‘ನೀಟ್ ಬರೆದಿದ್ದ 24 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಲಾಗಿದೆ. ಆದರೂ ಯಾಥಾಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಶರಣಾಗಿದ್ದಾರೆ’’ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...