ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

Date:

“ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಬೀದ‌ರ್‌ನಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿ, “ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ? ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಅವರಿಗೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳಲು ಯಾವ ನೈತಿಕ ಹಕ್ಕಿದೆ” ಎಂದು ಪ್ರಶ್ನಿಸಿದರು.

“ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ

ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರ ಇದೇ ಧೋರಣೆ ಹೊಂದಿದ್ದಾರಾ ಎಂದು ಮಾಧ್ಯಮದವರು ಪ್ರಶ್ನಿಸಿದಾಗ,” ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ.
ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. , 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ ? ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ” ಎಂದು ಸಿಎಂ ಪ್ರಶ್ನಿಸಿದರು.

ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮುಂದುವರೆದಿದೆ

“ಕಾಂಗ್ರೆಸ್ ಪಕ್ಷ ಎಸ್ ಸಿ ಎಸ್ ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ” ಎಂದು ಮೋದಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿತ್ತು. ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ನ ಮೊರೆ ಹೋಯಿತು. ಆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...