ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

Date:

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ನಿವಾಸಕ್ಕೆ ಮಂಗಳವಾರ ಸಚಿವ ಹೆಚ್ ಕೆ ಪಾಟೀಲ್ ಭೇಟಿ ನೀಡಿ ಮಗಳ ಸಾವಿಗೆ ಸಾಂತ್ವನ ಹೇಳಿದರು.

ಈ ವೇಳೆ ಎಚ್​​ ಕೆ ಪಾಟೀಲ್​ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು. ಆಗ ಸಿಎಂ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ ಹಿರೇಮಠ ಜೊತೆ ಮಾತನಾಡಿ, “ನಾವು ನಿಮ್ಮ ಜೊತೆ ಇರುತ್ತೇವೆ, ಬರಲು ಆಗಲಿಲ್ಲ ವೆರಿ ಸಾರಿ” ಎಂದರು. ಪ್ರಕರಣವನ್ನು ಸಿಐಡಿಗೆ ನೀಡಿದ್ದಕ್ಕೆ ನಿಮಗೆ ಧನ್ಯವಾದ ಅಂತ ನಿರಂಜನ ಹಿರೇಮಠ ಸಿಎಂಗೆ ಹೇಳಿದರು.

ನಿರಂಜನ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್​ ಕೆ ಪಾಟೀಲ್, “ಅನಿವಾರ್ಯ ಕಾರಣಗಳಿಂದ ಸಿಎಂ ಬರುವುದಕ್ಕೆ ಆಗಿಲ್ಲ. ನೇಹಾ ತಂದೆ ನಿರಂಜನ ಜತೆ ಸಿಎಂ ಮಾತಾಡಿ ಸಾಂತ್ವನ ಹೇಳಿದ್ದಾರೆ. ನಿರಂಜನ ಹಿರೇಮಠಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೇಹಾ ಸಾವಿಗೆ ನ್ಯಾಯ ಸಿಗಲಿದೆ. ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುವಂತೆ ಹೈಕೋರ್ಟ್​ಗೆ ಪತ್ರ ಬರೆಯುತ್ತೇವೆ. ತಪ್ಪಿಸ್ಥರಿಗೆ ಸೂಕ್ತ ಶಿಕ್ಷೆ ಆಗುತ್ತೆ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...