ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

Date:

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ನ.14) ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದಬಾದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು” ಎಂದು ತಿಳಿಸಿದರು.

“ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ . ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ” ಎಂದರು.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ

“ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದ್ದೇವೆ” ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯೇಂದ್ರಗೆ ಉತ್ತರ ನೀಡುವುದಿಲ್ಲ

ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...