ನಾನಾಗಲಿ, ನನ್ನ ಪುತ್ರಿಯಾಗಲಿ ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಬೆಳಗಾವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ” ಎಂದು ಹೇಳಿದರು.

“ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ. ಅಭ್ಯರ್ಥಿಗಳ ನಾಮನಿರ್ದೇಶನವು ಜಾತಿ ಲೆಕ್ಕಾಚಾರಗಳನ್ನು ಆಧರಿಸಿರುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...