ನೇಪಾಳ ಚುನಾವಣೆ | ಇಂದು ಮತದಾನ; ಓಲಿಗೆ ಮತ್ತೆ ಒಲಿಯುವುದೇ ಅಧಿಕಾರ

Date:

‘ಜನ್‌-ಝೀ’ ಪ್ರತಿಭಟನೆಗೆ ಗುರಿಯಾಗಿ, ಸರ್ಕಾರ ಉರುಳಿಬಿದ್ದಿದ್ದ ನೇಪಾಳದಲ್ಲಿ ಚುನಾವಣೆ ನಡೆಯುತ್ತಿದೆ. ಗುರುವಾರ ಮತದಾನ ಆರಂಭವಾಗಿದೆ. ಯುವಜನರ ಪ್ರತಿಭಟನೆಯಿಂದ ಅಧಿಕಾರ ಕಳೆದುಕೊಂಡಿದ್ದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ನೇಪಾಳ ಜನರು ಓಲಿ ಅವರಿಗೆ ಮತ್ತೆ ಅಧಿಕಾರ ನೀಡುವರೇ ಎಂಬ ಕುತೂಹಲ ಹೆಚ್ಚಿದೆ.

ಕೆ.ಪಿ ಶರ್ಮಾ ಓಲಿ ಅವರು ನೇಪಾಳ ರಾಜಕೀಯದಲ್ಲಿ ಪಳಗಿರುವ ಹಿರಿಯ ನಾಯಕ. ಸುಮಾರು 50 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಓಲಿ ಅವರು ‘ಜನ್‌-ಝೀ’ ಪ್ರತಿಭಟನೆಯನ್ನು ಮುನ್ನಡೆಸಿದ್ದ ಯುವ ನಾಯಕ ಬಾಲೆನ್ ವಿರುದ್ಧ ಕಣಕ್ಕಳಿದಿದ್ದಾರೆ. ಈ ಇಬ್ಬರೂ ಝಾಪಾ-5 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರವು ಓಲಿ ಅವರ ಭದ್ರಕೋಟೆಯೂ ಆಗಿದೆ ಎನ್ನಲಾಗಿದೆ.

1952ರಲ್ಲಿ ಜನಿಸಿದ ಓಲಿ 1970ರಲ್ಲಿ ಹದಿಹರೆಯದ ಕಮ್ಯುನಿಸ್ಟ್ ಹೋರಾಟದ ಮೂಲಕ ಮುಂಚೂಣಿಗೆ ಬಂದವರು. ಪಕ್ಷರಹಿತ ವ್ಯವಸ್ಥೆಯನ್ನು ಮತ್ತು ರಾಜಪ್ರಭುತ್ವವನ್ನು ವಿರೋಧಿಸಿದ್ದವು. ಅವರು 1973ರ ಅಕ್ಟೋಬರ್‌ನಲ್ಲಿ ಝಾಪಾ ದಂಗೆ ಮತ್ತು ರಾಜಪ್ರಭುತ್ವ ವಿರೋಧಿ ಹೋರಾಟದಲ್ಲಿ ಬಂಧನಕ್ಕೊಳಗಾಗಿ, 14 ವರ್ಷ ಜೈಲಿನಲ್ಲಿದ್ದರು. ಆದರೆ, ಜೈಲಿನಿಂದ ಮರಳಿದ ಬಳಿಕ, ತಾವು ವಿರೋಧಿಸಿದ್ದ ಪಕ್ಷರಹಿತ ವ್ಯವಸ್ಥೆಯಲ್ಲಿಯೇ ಓಲಿ ಕೂಡ ಪ್ರಬಲ ನಾಯಕನಾಗಿ ಬೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರಲ್ಲಿ ಮತ್ತೆ ದೇಶದ ಚುಕ್ಕಾಣಿ ಹಿಡಿದ ಓಲಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವಂಶಾಡಳಿತ, ಸ್ವಜನ ಪಕ್ಷಪಾತದ ಆರೋಪಗಳು ಗಾಢವಾಗಿದ್ದವು. ಜೊತೆಗೆ, ಆರ್ಥಿಕ ಬಿಕ್ಕಟ್ಟಿ ಜನರನ್ನು ಕಾಡಲಾರಂಭಿಸಿತ್ತು. ಪರಿಣಾಮ, 2025ರ ಸೆಪ್ಟೆಂಬರ್‌ನಲ್ಲಿ ಓಲಿ ಸರ್ಕಾರದ ವಿರುದ್ಧ ಯುವಜನರು ಬೀದಿಗಿಳಿದಿದ್ದರು. ಯುವಜನರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಕುತ್ತಿದ್ದಂತೆಯೇ, ಓಲಿ ರಾಜೀನಾಮೆ ನೀಡಿದರು. ಇದೀಗ, ಅವರು ಝಾಪಾ-5 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...