ನೆಟೆರೋಗ ಪರಿಹಾರ | ಅಂತಿಮ ಕಂತಿನ ಹಣ ಬಿಡುಗಡೆ

Date:

  • ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಸಂತ್ರಸ್ತರಿಗೆ ಪರಿಹಾರ
  • ಸಂತ್ರಸ್ತರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ರೂ. ಹಣ ಬಿಡುಗಡೆ

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಮನವಿಯ ಮೇರೆಗೆ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ನೆಟೆರೋಗ ಸಂತ್ರಸ್ತರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ರೂ. ಹಣ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ ಬೆಳೆ ನೆಟೆ ರೋಗದಿಂದ ಹಾನಿಯಾದ ಬೆಳೆಯ ಪರಿಹಾರ ಪಾವತಿಗೆ ರೂ. 233 ಕೋಟಿ ಅನುದಾನ ಮೀಸಲಿರಿಸಿ ಆದೇಶ ಹೊರಡಿಸಿತ್ತು. ಈಗಾಗಲೇ ಎರಡು ಕಂತುಗಳಲ್ಲಿ ಒಟ್ಟು ರೂ. 148.33 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು.

ಸಂಕಷ್ಟದಲ್ಲಿರುವ ರೈತರ ನೆರವಾಗುವ ಸಲುವಾಗಿ ಬಾಕಿ ಹಣವನ್ನೂ ಬಿಡುಗಡೆ ಮಾಡುವಂತೆ ಕೃಷಿ ಸಚಿವರು ಕೋರಿದ ಹಿನ್ನಲೆಯಲ್ಲಿ ಅಂತಿಮ ಕಂತಿನ ಅನುದಾನ ರೂ.74.67 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ನಾಲ್ಕು ಜಿಲ್ಲೆಗಳ ಅರ್ಹ ರೈತರ ಖಾತೆಗೆ ಹಣ ವರ್ಗಾವಣೆ ಆಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...