ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ, ವಿಪಕ್ಷ ನಾಯಕನಾಗಿ ಅದು ನನ್ನ ಹಕ್ಕು: ರಾಹುಲ್ ಗಾಂಧಿ

Date:

ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ವಿರೋಧ ಪಕ್ಷದ ನಾಯಕ, ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮುಂಗಾರು ಅಧಿವೇಶನದ ವೇಳೆಯೇ ಮೋದಿ ವಿದೇಶ ಪ್ರವಾಸ: ವಿಪಕ್ಷಗಳ ಎದುರಿಸಲಾಗದೆ ಪಲಾಯನವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಸದನದ ಮೊದಲ ದಿನವೇ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಸಂಸದರು ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಒತ್ತಾಯಿಸಿದ್ದಾರೆ. ವಿಪಕ್ಷಗಳು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದು ಎರಡು ಬಾರಿ ಸದನವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, “ಪ್ರಶ್ನೆ ಏನೆಂದರೆ ರಕ್ಷಣಾ ಸಚಿವರು ಮತ್ತು ಅವರ (ಬಿಜೆಪಿ) ಜನರಿಗೆ ಮಾತನಾಡಲು ಅವಕಾಶವಿದೆ. ಅದರೆ ವಿರೋಧ ಪಕ್ಷದವರು ಏನೇ ಮಾತನಾಡಲು ಬಯಸಿದರೂ ಅವಕಾಶವಿಲ್ಲ. ವಿರೋಧ ಪಕ್ಷದ ಸಂಸದರು ಕೇವಲ ಸಂಕ್ಷಿಪ್ತ ಹೇಳಿಕೆಗಳನ್ನು ನೀಡಲು ಬಯಸಿದ್ದರು. ಆದರೆ ಅದಕ್ಕೂ ಅವಕಾಶ ನಿರಾಕರಿಸಲಾಗಿದೆ” ಎಂದರು.

ಇನ್ನು ಈ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಹುಲ್ ತರಾಟೆಗೆ ತೆಗೆದುಕೊಂಡರು. “ಪ್ರಧಾನಿ ಒಂದು ಕ್ಷಣ ಬಂದು ಆಮೇಲೆ ಸದನದಿಂದ ಹೊರಗೆ ಓಡಿಹೋದರು” ಎಂದರು.

ಇನ್ನು ಪ್ರಶ್ನೋತ್ತರ ಅವಧಿಯ ನಂತರ ಸಮಸ್ಯೆಗಳ ಬಗ್ಗೆ ಮಾತನಾಡಲು ಸದಸ್ಯರಿಗೆ ಅವಕಾಶ ನೀಡಲಾಗುವುದು. ನೋಟಿಸ್ ಸಲ್ಲಿಸುವ ಯಾವುದೇ ಸದಸ್ಯರಿಗೆ ಮಾತನಾಡಲು ಸಮಯ ನೀಡಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...