‘ಜ.20ರಂದು ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಘೋಷಣೆ’

Date:

ತನ್ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 19ರಂದು ಶುಕ್ರವಾರ ನಾಮಪತ್ರ ಸಲ್ಲಸಿಸಲಾಗುತ್ತದೆ. ಮರುದಿನ, ಜನವರಿ 20ರಂದು ನೂತನ ಅಧ್ಯಕ್ಷರನ್ನು ಘೋಷಿಸಲಾಗುತ್ತದೆ ಎಂದು ಹೇಳಿದೆ.

ಹಾಲಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಗಿದು ಸುಮಾರು ಒಂದು ವರ್ಷವೇ ಕಳೆಯುತ್ತಾ ಬಂದಿದೆ. ಆದರೂ, ನೂತನ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಒಮ್ಮತ ಬಾರದ ಹಿನ್ನೆಲೆ, ನಡ್ಡಾ ಅವರೇ ಅಧ್ಯಕ್ಷರಾಗಿ ಮುಂದುವರೆದಿದ್ದರು. ಇದೀಗ, ಹೊಸ ಅಧ್ಯಕ್ಷರ ಆಯ್ಕೆಗೆ ಬಿಜೆಪಿ ದಿನಾಂಕ ಘೋಷಿಸಿದೆ.

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಪಕ್ಷದ ಹಿರಿಯ ನಾಯಕರಾದ ಮೋದಿ, ಅಮಿತ್ ಶಾ ಹಾಗೂ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಕೇಂದ್ರ ಸಚಿವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ನಿತಿನ್ ನಬಿನ್ ಅವರ ಆಯ್ಕೆಗೆ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ನಿತಿನ್ ಅಲ್ಲದೆ ಇನ್ನೂ ಯಾರಾದರೂ ನಾಮಪತ್ರ ಸಲ್ಲಿಸಿದರೆ, ಜನವರಿ 20ರಂದು ಮತದಾನ ನಡೆಯಲಿದೆ. ಹೊಸ ಅಧ್ಯಕ್ಷರ ಆಯ್ಕೆಗಾಗಿ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಸ್ಥಳೀಯ ಸದಸ್ಯರವರೆಗೆ 5,717 ಮತದಾರರು ಮತಚಲಾಯಿಸಲಿದ್ದಾರೆ. ಬಹುಮತ ಪಡೆಯುವ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...