ಮನೆ ಕೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಸದ್ಯದಲ್ಲೇ ಹೊಸ ನಿಯಮ ಜಾರಿ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Date:

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮತ್ತು ಸ್ಮಾರ್ಟ್‌ ಕಾರ್ಡ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಲು ನಮ್ಮ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿದ್ದಾರೆ. ನಾನು ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಸಾಕಷ್ಟು ಸವಾಲುಗಳು ಇದ್ದವು. ಈಗಲೂ ಇವೆ. ಆದರೆ ಕಾರ್ಮಿಕರ ಕಲ್ಯಾಣಕ್ಕಾಗಿ ಏನಾದರೂ ಮಾಡಲೇ ಬೇಕು ಎಂಬ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 01 at 6.15.33 PM

ಅಸಂಘಟಿತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಸಾರಿಗೆ ಮಂಡಳಿ ರಚನೆ ಮಾಡಿದ್ದೇವೆ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಸಹಕಾರ ಹಾಗೂ ಬೆಂಬಲದಿಂದ ಈ ಮಂಡಳಿ ರಚನೆ ಸಾಧ್ಯವಾಯಿತು. ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ರೀತಿಯಿಂದ ಸಹಕಾರ ನೀಡಿದರು. ಹೊಸ ವಾಹನಗಳನ್ನು ಖರೀದಿ ಮಾಡಿದಾಗ ಸಂಗ್ರಹಿಸುವ ಕರದಿಂದ ಈ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ನಿಧಿ ಸ್ಥಾಪಿಸಿ ಜೀವ ವಿಮೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುವುದು. ಇಂತಹ ಒಂದು ಮಂಡಳಿಯನ್ನು ರಚನೆ ಮಾಡಿರುವುದು ಇಡೀ ದೇಶದಲ್ಲೇ ನಾವು ಎಂಬುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.

ಅಸಂಘಟಿತ ವಲಯದಲ್ಲಿ ಕೋಟ್ಯಂತರ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಅವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಲು ಹಣಕಾಸಿನ ಅಗತ್ಯವಿದೆ. ಅದಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲೆ ವಿಧಿಸುತ್ತಿರುವ ಕರದಲ್ಲಿ ಪಾಲು ಕೊಡುವಂತೆ ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಹಾಗಾದರೆ ಎರಡು ಸಾವಿರ ಕೋಟಿ ಹಣ ಮಂಡಳಿಗೆ ಬರಲಿದೆ. ಇದರೊಂದಿಗೆ ಜಿಎಸ್‌ಟಿಯಲ್ಲಿ ಒಂದಂಶ ಕೊಡಲು ಕೇಳಿದ್ದೇವೆ. ಕಾರ್ಪೋರೇಟ್‌ ತೆರಿಗೆಯಲ್ಲಿ ಪಾಲು ಕೇಳಿದ್ದೇವೆ. ಇದು ಸಿಕ್ಕರೆ ಸಾವಿರಾರು ಕೋಟಿ ಹಣ ಸಿಗಲಿದೆ. ಆ ಹಣದಿಂದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಸೌಲಭ್ಯ ಕೊಡಲು ಅನುಕೂಲವಾಗಲಿದೆ. ಇದೆಲ್ಲ ಸಾಕಾರವಾದರೆ ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ಕರ್ನಾಟಕದಲ್ಲಿ ಮೊದಲು ಎಂಬುದು ಹೆಮ್ಮೆಯ ವಿಷಯ ಎಂದರು.

ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣಕ್ಕಾಗಿ ಕಾಯ್ದೆ ಜಾರಿ ಮಾಡಿದ್ದೇವೆ. ಈ ಕ್ಷೇತ್ರದಲ್ಲೂ ಅಸಂಖ್ಯಾತ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಸಿನಿಮಾ ಟಿಕೆಟ್‌ ಮೇಲೆ ಸಣ್ಣ ಮೊತ್ತದ ಕರ ಹಾಕಿ ಅದಕ್ಕೆ ಸರ್ಕಾರದ ಹಣವೂ ನೀಡಿ ನಿಧಿ ಸ್ಥಾಪಿಸಿ ಈ ಕ್ಷೇತ್ರದ ಜನರಿಗಾಗಿ ಸೌಲಭ್ಯ ಒದಗಿಸಲಾಗುವುದು ಎಂದರು.

WhatsApp Image 2025 07 01 at 6.15.34 PM

ಇನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಕ್ರಾಂತಿಕಾರಕ ಕ್ರಮಗಳನ್ನು ಜಾರಿ ಮಾಡಿದೆ. ಇದು ರಾಹುಲ್‌ ಗಾಂಧಿ ಅವರ ಕನಸು. ಭಾರತ್‌ ಜೋಡೊ ಯಾತ್ರೆ ವೇಳೆ ಗಿಗ್‌ ಕಾರ್ಮಿಕರಿಗೆ ಸೌಲಭ್ಯಕ್ಕಾಗಿ ಮನವಿ ಮಾಡಿದ್ದರು. ರಾಜಸ್ಥಾನಕ್ಕಿಂತ ಒಳ್ಳೆಯ ಮಸೂದೆ ಜಾರಿ ಮಾಡಿದ್ದೇವೆ. ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಸಂಬಂಧ ಸಾಕಷ್ಟು ಸಭೆ ಮಾಡಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವವರು ಮತ್ತು ಅವರ ಅವಲಂಬಿತರಿಗೆ ಜೀವವಿಮೆ ಸೇರಿದಂತೆ ಹಲವಾರು ಸೌಲಭ್ಯಗಳು ಸಿಗಲಿವೆ ಎಂದರು.

ಇನ್ನು ಕಡ್ಡಾಯ ಉಪಧನ (ಗ್ರ್ಯಾಚುಯಿಟಿ) ಕಾಯ್ದೆ, ಅಂಬೇಡ್ಕರ್‌ ಸಹಾಯ ಹಸ್ತ, ಆಶಾದೀಪ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸದ್ಯದಲ್ಲೇ ಮನೆಕೆಲಸದವರಿಗೆ ಅನುಕೂಲವಾಗುವ ಬಿಲ್‌ ತರಲು ಸಿದ್ಧತೆ ನಡೆದಿದೆ ಎಂದರು.

ನಮ್ಮ ಸರ್ಕಾರದ ಪಂಚ ಗ್ಯಾರಂಟಿಗಳು ಕೋಟ್ಯಂತರ ಕುಟುಂಬಗಳನ್ನು ತಲುಪುತ್ತಾ ಇವೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಹಲವಾರು ಕಾರ್ಯಕ್ರಮಗಳು ಜಾರಿಯಲ್ಲಿವೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಬಿಜೆಪಿ ಆಡಳಿತದ ಅದ್ಭುತ: ಸಮರ್ಪಕ ರಸ್ತೆ ಕೊರತೆ; ಬೈಕ್ ಸಂಚಾರಕ್ಕೆ ರೈಲ್ವೇ ಹಳಿಯೇ ಆಧಾರ

ಸಮಾರಂಭದಲ್ಲಿ ಶಾಸಕರಾದ ಮಹೇಶ್‌ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಡಾ ಅಧ್ಯಕ್ಷ ಶಾಕೀರ್‌ ಸನದಿ, ಮಾಜಿ ಸಚಿವ ಹಿಂಡಸಗೇರಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್‌ ಖಾದ್ರಿ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...