ನೈಸ್ ಯೋಜನೆ | ಬಡವರ ಜಮೀನು ಉಳಿಸಿಕೊಟ್ಟರೆ, ಸಿದ್ದರಾಮಯ್ಯಗೆ ಆಭಾರಿಯಾಗಿರುತ್ತೇನೆ: ದೇವೇಗೌಡ

Date:

ನೈಸ್ ಯೋಜನೆಯಿಂದ ತುಂಬಾ ದಿನಗಳಿಂದ ಬಡವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಿ ಬಡವರ ಜಮೀನು ಉಳಿಸಿಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿರುತ್ತೇನೆ ಎಂದು ಮಾಜಿ ಪ್ರಧಾನಿಗಳೂ ಆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ​ಡಿ ದೇವೇಗೌಡ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಈಗಾಗಲೇ ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ನೇಮಕ‌ ಮಾಡಲಾಗಿದೆ. ವರದಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಅಕ್ರಮಗಳನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

“ಸರ್ಕಾರ ಈವರೆಗೆ ಯಾವುದೇ ಅಂತಿಮ ನಿರ್ಣಯ ತೆಗೆದುಕೊಂಡಿಲ್ಲ, ವಿಳಂಬವಾಗಿದೆ. ನೈಸ್ ಅಕ್ರಮದ ವಿರುದ್ದ ನಮ್ಮ ಪಕ್ಷ ಧ್ವನಿ ಎತ್ತಿದೆ. ವಿಧಾನಸಭೆಯಲ್ಲೂ ಸುದೀರ್ಘವಾಗಿ ಚರ್ಚೆಯಾಗಿದೆ. ಸೋನಿಯಾ ಗಾಂಧಿಯವರ ಜೊತೆ ಕೂಡ ಚರ್ಚೆ ಮಾಡಲಾಗಿತ್ತು. ಅವರು ಮಸ್ಟ್ ಟೇಕ್ ಆಕ್ಷನ್ ಅಂತಾ ಹೇಳಿದ್ದರು” ಎಂದು ದೇವೇಗೌಡ ನೆನಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ

“ನೈಸ್ ರಸ್ತೆಗೆ ಒಳಪಡದೆ ಇರುವ ಭೂಮಿ ಎಷ್ಟಿದೆ ಅಂತಾ ಅಂದಾಜು ಮಾಡಿದಾಗ ವ್ಯಾಲ್ಯೂ ಜಾಸ್ತಿಯಾಗುತ್ತದೆ. ಸಿಎಂ ಸಿದ್ದರಾಮಯ್ಯ ಯಾವಾಗಲೂ ಬಡವರ ಪರ ಎಂದು ಹೇಳುತ್ತಾರೆ. ಯೋಜನೆ ಬಗ್ಗೆ ಬಿಎಸ್ ಯಡಿಯೂರಪ್ಪ ಅವರ ಆಡಳಿತ ಅವಧಿಯಲ್ಲಿ ಅಫಿಡವಿಟ್ ಹಾಕಿದ್ದಾರೆ. ಅದರಲ್ಲಿ, ಹೆಚ್ಚುವರಿ ಜಮೀನು ತೆಗೆದುಕೊಂಡಿದ್ದಾರೆ, ಅವರಿಗೆ ಹೆಚ್ಚು ಜಮೀನು ಕೊಡಲು ಸಾದ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ. ಬಡವರನ್ನ, ಅವರ ಜಮೀನನ್ನ ಸಿದ್ದರಾಮಯ್ಯ ಉಳಿಸಿಕೊಟ್ಟರೆ ಅವರಿಗೆ ಆಭಾರಿಯಾಗಿರುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...