ಲೋಕಸಭೆ ಚುನಾವಣೆ |ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

Date:

  • ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ
  • ಮೈಸೂರಿನ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಅಖಿಲೇಶ್

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಗುರುವಾರ(ಜೂನ್‌ 15) ಉತ್ತರಪ್ರದೇಶದ ಅಖಿಲೇಶ್‌ ಯಾದವ್ ನಿವಾಸದಲ್ಲಿ ಮಾಜಿ ಸಿಎಂ ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ, ರಾಜ್ಯ ಹಾಗೂ ರಾಷ್ಟ್ರೀಯ ರಾಜಕಾರಣ ಮತ್ತು ಭವಿಷ್ಯದ ರಾಜಕಾರಣ ವಿಚಾರವಾಗಿ ಚರ್ಚೆ ನಡೆಸಿದರು.

ಮುಂದಿನ ಲೋಕಸಭೆ ಚುನಾವಣೆ ಎದುರಿಸಲು ಅಖಿಲೇಶ್ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ. ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ ಎಂದು ನಿಖಿಲ್ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ತಮ್ಮೊಂದಿಗೆ ಕೂಲಂಕಷವಾಗಿ ಚರ್ಚಿಸಿದ ಅಖಿಲೇಶ್ ಅಗತ್ಯ ಮಾಹಿತಿ ಕಲೆಹಾಕಿಕೊಂಡರು ಎಂದು ನಿಖಿಲ್ ಹೇಳಿದರು.‌

ಈ ಸುದ್ದಿ ಓದಿದ್ದೀರಾ?:‌ ಚುನಾವಣೆ ಹೊಸ್ತಿಲಲ್ಲಿ ಮಧ್ಯಪ್ರದೇಶ: ಸರ್ಕಾರದ ಮುಖ್ಯ ಕಚೇರಿಗೆ ಬೆಂಕಿ; ಭಯದಲ್ಲಿದೆಯಾ ಬಿಜೆಪಿ?

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದ ನಿಖಿಲ್, ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಆರೋಗ್ಯದ ಬಗೆಗೂ ಅಖಿಲೇಶ್ ಮಾಹಿತಿ ಪಡೆದುಕೊಂಡರು ಎಂದರು.

ಮೈಸೂರಿನ ದಿನಗಳ ಮೆಲುಕು

ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ದಿನಗಳನ್ನು ಅಖಿಲೇಶ್ ಯಾದವ್ ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಇದಕ್ಕೆ ನಾನು ಅಭಿನಂದನೆ ಸಲ್ಲಿಸಿದೆ ಎಂದು ನಿಖಿಲ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...