ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟ್ವೀಟ್ ವೈರಲ್

Date:

ಇತ್ತೀಚೆಗೆ ತಮಿಳುನಾಡು ಸರ್ಕಾರವು 2025-26ರ ಬಜೆಟ್ ಅನ್ನು ಮಂಡಿಸಿದೆ. ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ ‘ரூ'(ರೂ)ವಿನೊಂದಿಗೆ ಬದಲಾಯಿಸಿದೆ. ಈ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಗರು ಡಿಎಂಕೆ ಸರ್ಕಾರವನ್ನು ಟೀಕಿಸಿದ್ದಾರೆ. ಈ ನಡುವೆ ನಿರ್ಮಲಾ ಸೀತಾರಾಮನ್ ತನ್ನ ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆಯನ್ನು ಬಳಸಿದ್ದ ಸ್ಕ್ರೀನ್‌ಶಾಟ್‌ಗಳು ವೈರಲ್ ಆಗಿದೆ.

ಈ ಬಗ್ಗೆ ಇತ್ತೀಚೆಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕೇಂದ್ರ ವಿತ್ತ ಸಚಿವೆ, “ಡಿಎಂಕೆ ಸರ್ಕಾರ ತಮಿಳುನಾಡು ಬಜೆಟ್ 2025-26ರಲ್ಲಿ ರೂಪಾಯಿ ಚಿಹ್ನೆಯಾದ ₹ ಅನ್ನು ಬದಲಾಯಿಸಿದೆ ಎಂದು ತಿಳಿದುಬಂದಿದೆ. ಡಿಎಂಕೆಗೆ ₹ ಚಿಹ್ನೆಯಿಂದ ಸಮಸ್ಯೆಯಿದ್ದರೆ, 2010ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಈ ಚಿಹ್ನೆಯನ್ನು ಅಧಿಕೃತವಾಗಿ ಬಳಸಿದಾಗ ಯಾಕೆ ವಿರೋಧಿಸಿಲ್ಲ? ಆ ಸಂದರ್ಭದಲ್ಲಿ ಡಿಎಂಕೆ ಯುಪಿಎ ಸರ್ಕಾರದ ಭಾಗವಾಗಿತ್ತಲ್ಲವೇ” ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಡಿಎಂಕೆ ಪ್ರಾದೇಶಿಕತೆಯ ಸೋಗಿನಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂಬ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ, ಎಂ ಕೆ ಸ್ಟಾಲಿನ್‌ನಿಂದ ದಿಟ್ಟ ಕ್ರಮ: ಕರವೇ ನಾರಾಯಣಗೌಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಮಲಾ ಸೀತಾರಾಮನ್ ಅವರ ಈ ಎಕ್ಸ್‌ ಪೋಸ್ಟ್‌ಗೆ ಪತ್ರಕರ್ತ, ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮುಹಮ್ಮದ್ ಝುಬೈರ್, ಪ್ರತಿಕ್ರಿಯೆ ನೀಡಿದ್ದಾರೆ. 2017ರಲ್ಲಿ ನಿರ್ಮಲಾ ಸೀತಾರಾಮನ್ ಅವರು ತಮಿಳು ‘ரூ'(ರೂ)ಚಿಹ್ನೆಯನ್ನು ಹಲವು ಬಾರಿ ಎಕ್ಸ್‌ ಪೋಸ್ಟ್‌ನಲ್ಲಿ ಬಳಸಿದ್ದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಸ್ಕ್ರೀನ್‌ಶಾಟ್‌ಗಳು ಎಕ್ಸ್‌ನಲ್ಲಿ, ಇತರೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ನೆಟ್ಟಿಗರು ಹೇಳುವುದೇನು?

“ಡಿಎಂಕೆ ಸರ್ಕಾರ ಯಾವ ಚಿಹ್ನೆಯನ್ನು ಬಳಸಿದ್ದಕ್ಕೆ ನಿರ್ಮಲಾ ಸೀತಾರಾಮನ್ ಅವರು ಡಿಎಂಕೆ ಸರ್ಕಾರವನ್ನು ಟೀಕಿಸುತ್ತಿದ್ದರೋ, ಅದೇ ಚಿಹ್ನೆಯನ್ನು ಈ ಹಿಂದೆ ಅವರು ಬಳಸಿ ಈಗ ಸಿಕ್ಕಿಬಿದ್ದಿದ್ದಾರೆ. ಈ ಟ್ವೀಟ್‌ಗಳನ್ನು ಖಂಡಿತವಾಗಿಯೂ ಶೀಘ್ರವಾಗಿ ಡಿಲೀಟ್ ಮಾಡಬಹುದು. ಈಗಲೇ ಶೇರ್ ಮಾಡಿ, ಸೇವ್ ಮಾಡಿ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

“ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಅವರು ಈ ಹಿಂದೆ ತಮಿಳಿನಲ್ಲಿ ಟ್ವೀಟ್ ಮಾಡುವಾಗ ரூ ಚಿಹ್ನೆಯನ್ನು ಬಳಸಿದ್ದಾರೆ. ಈಗ ಡಿಎಂಕೆ ಈ ಚಿಹ್ನೆ ಬಳಸಿದಾಗ ಬಿಜೆಪಿ ಅಳುತ್ತಿದೆ. ಅಜೆಂಡಾವನ್ನು ನಾಶ ಮಾಡಲು ಈ ಟ್ವೀಟ್‌ಗಳನ್ನು ಹಂಚಿಕೊಳ್ಳಿ” ಎಂದು ಇನ್ನೋರ್ವ ನೆಟ್ಟಿಗರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...