ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಸೇರಿ ಕರ್ನಾಟಕದಿಂದ ಕೇಂದ್ರ ಸಚಿವರಾಗಿ ಐವರು

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಎನ್‌ಡಿಎ ಸರ್ಕಾರದಲ್ಲಿ ಸಂಪುಟದ ಸಚಿವರಾಗಿ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಸೇರಿ ಐವರು ಸಂಸತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ಕೇಂದ್ರ ಸಚಿವರಾಗಿ ಹೆಚ್‌ ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಲ್ಹಾದ್ ಜೋಶಿ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ ಕೂಡ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಐವರು ಕೇಂದ್ರ ಸಚಿವರುಗಳ ಪೈಕಿ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ಹೆಚ್ ಡಿ ಕುಮಾರಸ್ವಾಮಿ ಕ್ಯಾಬಿನೆಟ್ ದರ್ಜೆಯ ಸಚಿವರುಗಳಾದರೆ, ಶೋಭಾ ಕರಂದ್ಲಾಜೆ ಹಾಗೂ ವಿ ಸೋಮಣ್ಣ ರಾಜ್ಯ ಖಾತೆ ಸಚಿವರಾಗಿದ್ದಾರೆ.

ಹೆಚ್‌ ಡಿ ಕುಮಾರಸ್ವಾಮಿ

ಕರ್ನಾಟಕ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್​ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕಿಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ಕೃಷಿ ಇಲಾಖೆ ಸಿಗುವ ಸಾಧ್ಯತೆ ಇದೆ.

ಪ್ರಲ್ಹಾದ್ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿರುವ ಪ್ರಲ್ಹಾದ್ ಜೋಶಿ, ಕಳೆದ ಬಾರಿಯ ಮೋದಿ ಸರ್ಕಾರದಲ್ಲೂ ಕೂಡ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದರು. ಸಂಸದೀಯ ವ್ಯವಹಾರಗಳ ಖಾತೆಯನ್ನು ನಿಭಾಯಿಸಿದ್ದರು. ನರೇಂದ್ರ ಮೋದಿಯವರ ಆಪ್ತರಲ್ಲಿ ಓರ್ವರಾಗಿ ಇವರು ಗುರುತಿಸಿಕೊಂಡಿದ್ದಾರೆ. ಈ ಬಾರಿ ಯಾವ ಖಾತೆ ಸಿಗಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್, ಮೂಲತಃ ಆಂಧ್ರದವರಾಗಿದ್ದರೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಮೊದಲ ಬಾರಿಗೆ ಗದ್ದುಗೆ ಏರಿದಾಗ ಇವರಿಗೆ ರಾಜ್ಯ ಖಾತೆಯ ಸಚಿವರನ್ನಾಗಿ ಮಾಡಲಾಯಿತು. ಇವರ ಕೆಲಸ ನೋಡಿದ ಬಿಜೆಪಿ ವರಿಷ್ಠರು ಇವರಿಗೆ 2017ರಲ್ಲಿ ಭಡ್ತಿ ನೀಡಿದ್ದರು. ಅಲ್ಲದೇ, ರಕ್ಷಣಾ ಇಲಾಖೆಯ ಕೆಲಸವನ್ನು ಇವರ ಹೆಗಲಿಗೆ ಹೊರಿಸಿದರು. ಈ ಮೂಲಕ ಈ ಖಾತೆಯನ್ನು ನಿರ್ವಹಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಈ ಖಾತೆಯನ್ನು ನಿರ್ವಹಿಸಿದ್ದರು.

ಕಳೆದ ಮೋದಿ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿ ಯಾವ ಖಾತೆ ಸಿಗಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ವಿ ಸೋಮಣ್ಣ

ಸತತ ಸೋಲಿನ ಬಳಿಕ ವಿ ಸೋಮಣ್ಣ ಅವರಿಗೆ ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಕಾಂಗ್ರೆಸ್‌ನ ಮುದ್ದಹನುಮೇಗೌಡರನ್ನು ಸೋಲಿಸಿ, ಸಂಸದರಾಗಿದ್ದಾರೆ.

ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.

ಬಿಜೆಪಿ ಕಾರ್ಯಕರ್ತರೇ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ನಡೆಸಿದ್ದರಿಂದ ಈ ಬಾರಿ ಉಡುಪಿ-ಚಿಕ್ಕಮಗಳೂರಿನ ಬದಲಿಗೆ, ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...