ಗೋಡ್ಸೆಯನ್ನು ಹೊಗಳಿದ್ದ ಎನ್ಐಟಿ ಕ್ಯಾಲಿಕಟ್ ಪ್ರಾಧ್ಯಾಪಕಿ ಡೀನ್ ಆಗಿ ನೇಮಕ; ತೀವ್ರ ವಿರೋಧ

Date:

ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಎನ್ಐಟಿ ಕ್ಯಾಲಿಕಟ್ ಪ್ರಾಧ್ಯಾಪಕಿಯೊಬ್ಬರನ್ನು ಈಗ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯ ಡೀನ್ ಆಗಿ ನೇಮಿಸಲಾಗಿದೆ.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ-ಕ್ಯಾಲಿಕಟ್ (ಎನ್ಐಟಿ) ನಿರ್ದೇಶಕಿ ಡಾ. ಶೈಜಾ ಎ ಗಾಂಧೀಜಿ ಅವರ ಹುತಾತ್ಮ ದಿನದಂದು ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದರು. ಇದೀಗ ಶೈಜಾ ಅವರನ್ನೇ ಮಾರ್ಚ್ 7ರಿಂದ ಜಾರಿಗೆ ಬರುವಂತೆ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯ ಡೀನ್ ಆಗಿ ನೇಮಿಸಲಾಗಿದೆ.

ಇದನ್ನು ಓದಿದ್ದೀರಾ? ಗಾಂಧಿ ಕೊಲೆ ಸಂಭ್ರಮಿಸಿ, ಗೋಡ್ಸೆಗೆ ಜೈಕಾರ ಕೂಗಿದ ಹಿಂದು ಮಹಾಸಭಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲಪಂಥೀಯ ವಕೀಲರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದ ಶೈಜಾ, ಗೋಡ್ಸೆ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿ ಭಾರತವನ್ನು ಉಳಿಸಿದ್ದಾರೆ, ಅವರ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದರು.

ಗೋಡ್ಸೆ 2

ಶೈಜಾ ಕಾಮೆಂಟ್ ಅನ್ನು ಖಂಡಿಸಿದ್ದ ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಯುವ ಕಾಂಗ್ರೆಸ್‌ನಂತಹ ಸಂಘಟನೆಗಳು ದೂರು ದಾಖಲಿಸಿತ್ತು. ಇದಾದ ಬಳಿಕ ಶೈಜಾ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಕುನ್ನಮಂಗಲಂ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.

ಆದರೆ ಈಗ ಶೈಜಾ ಅವರನ್ನೇ ಡೀನ್ ಆಗಿ ನೇಮಿಸಲಾಗಿದೆ. ಇದನ್ನು ಹಲವು ರಾಜಕೀಯ ಪಕ್ಷಗಳು ಸಿಪಿಐ(ಎಂ) ನ ಯುವ ಘಟಕವಾದ ಡಿವೈಎಫ್‌ಐ ಖಂಡಿಸಿದ್ದು, ಎನ್ಐಟಿಗೆ ಪ್ರತಿಭಟನಾ ಮೆರವಣಿಗೆಯನ್ನು ಘೋಷಿಸಿದೆ.

ಇದನ್ನು ಓದಿದ್ದೀರಾ? ಕಾಯುತಲಿದೆ ಹಂತಕ ಗೋಡ್ಸೆಯ ಚಿತಾಭಸ್ಮ, ಪುಣೆಯ ಶಿಥಿಲ ಖೋಲಿಯಲಿ!

ಬಲಪಂಥೀಯ ಸಿದ್ಧಾಂತ ಇರುವವರಿಗೆ ದೇಶದಲ್ಲಿ ವಿವಿಧ ಹುದ್ದೆಗಳನ್ನು ನೀಡುರುವ ಹಲವು ನಿದರ್ಶನಗಳಿವೆ. ಅದರಲ್ಲೂ ಮುಖ್ಯವಾಗಿ ಕೇಂದ್ರವನ್ನು ಹಾಡಿಹೊಗಳಿದ ನ್ಯಾಯಮೂರ್ತಿಗಳು ನಿವೃತ್ತರಾದ ಬಳಿಕ ವಿವಿಧ ಸಂಸ್ಥೆಗಳಲ್ಲಿ ಸ್ಥಾನ ಪಡೆದಿರುವುದನ್ನೂ ನಾವು ಮರೆಯುವಂತಿಲ್ಲ.

ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ 2018ರ ಜುಲೈ 6ರಂದು ನಿವೃತ್ತರಾಗಿದ್ದು ಅಂದೇ ರಾಷ್ಟ್ರೀಯ ಹಸಿರು ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಹೀಗೆಯೇ ನ್ಯಾಯಮೂರ್ತಿ ಅರುಣ್ ಮಿಶ್ರಾ, ಅಶೋಕ್ ಭೂಷಣ್, ಹೇಮಂತ್ ಗುಪ್ತಾ, ಎಸ್‌ ಅಬ್ದುಲ್ ನಜೀರ್, ರಂಜನ್ ಗೊಗೇಯ್ ಸೇರಿದಂತೆ ಹಲವು ನ್ಯಾಯಮೂರ್ತಿಗಳು ನಿವೃತ್ತಿ ಪಡೆದ ಐದು ವರ್ಷದೊಳಗಾಗಿಯೇ ಉನ್ನತ ಹುದ್ದೆಗಳನ್ನು ಪಡೆದುಕೊಂಡಿದ್ದಾರೆ. ಇದೇ ರೀತಿ ಇತರೆ ಕ್ಷೇತ್ರಗಳಲ್ಲಿಯೂ ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಿಗೆ ಹುದ್ದೆಯನ್ನು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...