ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ: ಜ. 20ಕ್ಕೆ ಅಧಿಕಾರ ಸ್ವೀಕಾರ

Date:

ಬಿಜೆಪಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆಯಾಗಿದ್ದು, ಜನವರಿ 20ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 11:30ರ ಸುಮಾರಿಗೆ ಅಧಿಕಾರ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಹಿಂದೆ ದೀರ್ಘಕಾಲ ಜೆ.ಪಿ. ನಡ್ಡಾ ಬಿಜೆಪಿ ಅಧ್ಯಕ್ಷರಾಗಿದ್ದರು. ಇದೀಗ 45 ವರ್ಷ ವಯಸ್ಸಿನ ನಿತಿನ್ ನಬಿನ್ ಆ ಸ್ಥಾನವನ್ನು ತುಂಬಲಿದ್ದು, ಬಿಜೆಪಿಯ ಇತಿಹಾಸದಲ್ಲಿಯೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನು ಓದಿದ್ದೀರಾ? ಜ. 20ಕ್ಕೆ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತಿನ್ ನಬಿನ್ ಪರವಾಗಿ ಒಟ್ಟು 37 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ, ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ನಬಿನ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದ್ದಾರೆ.

ಬಿಹಾರದ ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಿತಿನ್ ನಬಿನ್, ದಿವಂಗತ ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರ. ಬಂಕಿಪುರ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿದ್ದಾರೆ.

ಕಳೆದ ಎರಡು ದಶಕಗಳಿಂದ ಸಂಘಟನೆಯಲ್ಲಿ ಸಕ್ರಿಯರಾಗಿರುವ ಇವರು, ಭಾರತೀಯ ಜನತಾ ಯುವ ಮೋರ್ಚಾದ ಬಿಹಾರ ಘಟಕದ ಅಧ್ಯಕ್ಷರಾಗಿ ಹಾಗೂ ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...