ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

Date:

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ.

‘ಜನ್ ಸೂರಾಜ್’ ಅಭಿಯಾನವನ್ನು ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಭಾಗಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, “ನಿತೀಶ್ ಕುಮಾರ್ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರ ಪಾದವನ್ನು ಸ್ಪರ್ಶಿಸಿದ್ದಾರೆ” ಎಂದು ಆರೋಪಿಸಿದರು.

ನಿತೀಶ್ ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ನಾನು ನಿತೀಶ್ ಕುಮಾರ್ ಅವರ ಜೊತೆ ಕೆಲಸ ಮಾಡಿದ್ದೇನೆ. ಈಗ ಅವರನ್ನೇ ಟೀಕಸುತ್ತೇನೆ. ಇದನ್ನು ಜನರು ಪ್ರಶ್ನಿಸುತ್ತಾರೆ. ಆದರೆ ನಿತೀಶ್ ಆಗ ವಿಭಿನ್ನ ವ್ಯಕ್ತಿಯಾಗಿದ್ದರು. ಅವರ ಆತ್ಮಸಾಕ್ಷಿಯನ್ನು ಮಾರಾಟ ಮಾಡಿರಲಿಲ್ಲ” ಎಂದು ಪ್ರಶಾಂತ್ ಕಿಶೋರ್ ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಸುಳ್ಳಾದ ಭವಿಷ್ಯ | ಇನ್ನು ಮುಂದೆ ಚುನಾವಣಾ ಸೀಟುಗಳನ್ನು ಊಹಿಸುವುದಿಲ್ಲ: ಪ್ರಶಾಂತ್ ಕಿಶೋರ್

ಪ್ರಶಾಂತ್ ಕಿಶೋರ್ 2015ರಲ್ಲಿ ನಿತೀಶ್ ಕುಮಾರ್ ಅವರ ಜೆಡಿಯುನ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದರು. ಅದಾದ ಎರಡು ವರ್ಷಗಳ ಬಳಿಕ ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

“ರಾಜ್ಯದ ನಾಯಕ ಎಂದರೆ ಆ ರಾಜ್ಯದ ಜನರ ಹೆಮ್ಮೆ. ಆದರೆ ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿ ಬಿಹಾರಕ್ಕೆ ಅವಮಾನ ಮಾಡಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ಕಳೆದ ವಾರ ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.

“ಪ್ರಧಾನಿ ಮೋದಿ ಅಧಿಕಾರಕ್ಕೆ ಮರಳುವಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ತುಂಬಾ ಮಾತನಾಡುತ್ತಿದ್ದಾರೆ. ಆದರೆ ಬಿಹಾರ ಸಿಎಂ ತಮ್ಮ ಸ್ಥಾನವನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

“ನಿತೀಶ್ ರಾಜ್ಯಕ್ಕೆ ಲಾಭ ತರಲು ತನ್ನ ಪ್ರಭಾವ ಬಳಸುತ್ತಿಲ್ಲ. ಬದಲಾಗಿ 2025ರ ವಿಧಾನಸಭಾ ಚುನಾವಣೆಯ ನಂತರವೂ ಬಿಜೆಪಿ ಬೆಂಬಲದೊಂದಿಗೆ ಅಧಿಕಾರವನ್ನು ಪಡೆಯಲೆಂದು ಪ್ರಧಾನಿ ಮೋದಿ ಪಾದ ಸ್ಪರ್ಶಿಸುತ್ತಿದ್ದಾರೆ” ಎಂದು ಆರೋಪಿಸಿದರು.

2014ರಲ್ಲಿ ಪಿಎಂ ಮೋದಿ ಪ್ರಚಾರವನ್ನು ನಿಭಾಯಿಸಿದ ಬಳಿಕ ಪ್ರಶಾಂತ್ ಕಿಶೋರ್ ಮೊದಲ ಬಾರಿಗೆ ಖ್ಯಾತಿ ಪಡೆದಿದ್ದಾರೆ. ಆದರೆ ಅದಾದ ಬಳಿಕ ಅವರ ಹಲವು ಚುನಾವಣಾ ಭವಿಷ್ಯಗಳು ಹುಸಿಯಾಗಿದೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿಯೂ ಪ್ರಶಾಂತ್ ಕಿಶೋರ್ ಭವಿಷ್ಯ ಸುಳ್ಳಾಗಿದೆ. ಅದಾದ ಬಳಿಕ “2024ರ ಲೋಕಸಭಾ ಚುನಾವಣೆಯ ಬಗ್ಗೆ ನಾನು ನೀಡಿದ್ದ ಭವಿಷ್ಯವು ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಯಾವುದೇ ಚುನಾವಣಾ ಸೀಟುಗಳನ್ನು ಊಹಿಸುವುದಿಲ್ಲ” ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ.

“ಬಿಜೆಪಿ 303 ಅಥವಾ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಜೂನ್ 4ರಂದು ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ” ಎಂದು ಭವಿಷ್ಯ ನುಡಿದಿದ್ದರು. ಬಿಜೆಪಿ ಸೇರಿ ಸಂಪೂರ್ಣ ಎನ್‌ಡಿಎ ಮೈತ್ರಿಕೂಟ 292 ಹಾಗೂ ಇಂಡಿಯಾ ಮೈತ್ರಿಕೂಟ 232 ಸ್ಥಾನಗಳನ್ನು ಪಡೆದಿದ್ದು ಪ್ರಶಾಂಶ್ ಕಿಶೋರ್ ಭವಿಷ್ಯ ಸುಳ್ಳಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...