ಬ್ರೇಕಿಂಗ್ ನ್ಯೂಸ್‌ | ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Date:

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಗೆ ನಿತೀಶ್‌ ಅವರ ಜೆಡಿಯು ಮರಳುತ್ತದೆ ಎಂಬ ಊಹಾಪೋಹಗಳು ಕೆಲ ದಿನಗಳಿಂದ ಹರಡಿದ್ದವು. ಆದರೆ, ಆ ಬಗ್ಗೆ ಯಾವುದೇ ಮಾತನಾಡದ ನಿತೀಶ್‌ ಕುಮಾರ್, ಇದೀಗ ರಾಜೀನಾಮೆ ನೀಡಿದ್ದಾರೆ.

ನಿತೀಶ್‌ ಕುಮಾರ್ ಅವರು ಭಾನುವಾರ ಬೆಳಗ್ಗೆ ರಾಜ್ಯಪಾಲರ ಕಚೇರಿಗೆ ತೆರಳಿ, ರಾಜೀನಾಮೆ ನೀಡಿದ್ದಾರೆ. ಅದಕ್ಕೂ ಮುನ್ನ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಮರಳು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಿತೀಶ್ ಕುಮಾರ್ ಅವರು ಆರ್‌ಜೆಡಿ ಮತ್ತು ಕಾಗ್ರೆಂಸ್‌ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಈಗ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್‌, 28 ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಿಂದಲೂ ಹೊರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು, ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಇವೆ. ಬಿಹಾರದ ಎಲ್ಲ ಬಿಜೆಪಿ ಶಾಸಕರು ಈಗಾಗಲೇ ನಿತೀಶ್‌ ಕುಮಾರ್‌ಗೆ ಬೆಂಬಲ ಪತ್ರ ನೀಡಿದ್ದಾರೆ ಎಂದು ವರದಿಯಾಗಿದೆ.

ನಿತೀಶ್ ಅವರ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿವೆ. ಚುನಾವಣೆಗೆ ಸೀಟು ಹಂಚಿಕೆಯ ಒಪ್ಪಂದವೂ ಈಗಾಗಲೇ ಮುಗಿದಿದೆ ಎಂದು ಹೇಳಲಾಗಿದೆ.

ಈ ವರದಿ ಓದಿದ್ದೀರಾ?: ಬಿಹಾರ | ಬಿಜೆಪಿ ಸಖ್ಯ ತೊರೆದಿದ್ದ ನಿತೀಶ್‌, ಮತ್ತೆ ಎನ್‌ಡಿಎ ಸೇರ ಹೊರಟ್ಟಿದ್ದು ಯಾಕೆ? 

ಬಿಹಾರದ ಬಿಜೆಪಿ ಶಾಸಕರು ಮತ್ತು ಸಂಸದರು ಪಾಟ್ನಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದು, ಮತ್ತಷ್ಟು ಕಾರ್ಯತಂತ್ರಗಳನ್ನು ರೂಪಿಸಿದ್ದಾರೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೆಲ ಬಿಜೆಪಿ ನಾಯಕರು ಭಾನುವಾರ ಮಧ್ಯಹ್ನ ಪಾಟ್ನಾಗೆ ತೆರಳಲಿದ್ದು, ಮತ್ತೊಂದು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ, ಬಿಜೆಪಿ ಜೊತೆಗೆ ಮೈತ್ರಿ ಮಾಡಿದ್ದ ನಿತೀಶ್‌ ಕುಮಾರ್, 2022ರ ಆಗಸ್ಟ್‌ನಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ತೊರೆದಿದ್ದರು. ಆಗ, ‘ತನ್ನ ಪಕ್ಷವನ್ನು ಒಡೆದು ಮುಗಿಸಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು. ಬಳಿಕ, ಆರ್‌ಜೆಡಿ ಮತ್ತು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಇದೀಗ, ಮತ್ತೆ ಸರ್ಕಾರವನ್ನು ಉರುಳಿಸಿ, ಬಿಜೆಪಿಯೊಂದಿಗೆ ಮರಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...