ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಿಶಾಂತ್ ಭಾನುವಾರ ಸಂಜೆ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲು ಮುಂದಾಗಿದ್ದಾರೆ. ಭಾನುವಾರ ಸಂಜೆ ನಿಗದಿಯಾಗಿರುವ ‘ನಿಶಾಂತ್ ಸಂವಾದ’ ಘೋಷಣೆಯ ಪೋಸ್ಟರ್‌ಗಳು ಜೆಡಿ(ಯು) ಕಚೇರಿಯ ಸುತ್ತಮುತ್ತ ಕಂಡುಬಂದಿದೆ.

ಜೆಡಿ(ಯು) ಮುಖ್ಯಸ್ಥರ 40 ವರ್ಷದ ಏಕೈಕ ಪುತ್ರ ಈ ಹಿಂದಿನಿಂದಲೂ ರಾಜಕೀಯ ಪ್ರವೇಶದ ಪ್ರಶ್ನೆಯನ್ನು ನಿರ್ಲಕ್ಷಿಸುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿಯೂ ನಿಶಾಂತ್ ರಾಜಕೀಯ ಸೇರುವ ಬಗ್ಗೆ ವದಂತಿಗಳು ಹರಡಿದ್ದವು ಈ ಬಗ್ಗೆ ಪಟನಾ ಮಾರುಕಟ್ಟೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ನಿಶಾಂತ್ ಪ್ರಶ್ನೆಯನ್ನು ನಿರ್ಲಕ್ಷಿಸಿದ್ದರು.

ಇದನ್ನು ಓದಿದ್ದೀರಾ? ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ, ನಿತೀಶ್ ಪುತ್ರ ನಿಶಾಂತ್‌ಗೆ ಜವಾಬ್ದಾರಿ ಹಸ್ತಾಂತರಿಸಲಿ: ಮಾಜಿ ಸಿಎಂ ರಾಬ್ರಿ ದೇವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ. ಹರೇ ರಾಮ ಹರೇ ಕೃಷ್ಣ ಭಜನೆಯನ್ನು ಕೇಳಲು ಸ್ಪೀಕರ್ ಖರೀದಿಸಲು ನಾನು ಇಲ್ಲಿಗೆ ಬಂದಿದ್ದೇನೆ. ನಾನು ಪ್ರತಿದಿನ ಬೆಳಿಗ್ಗೆ ನನ್ನ ಫೋನ್‌ನಲ್ಲಿ ಈ ಭಜನೆಯನ್ನು ಕೇಳುತ್ತೇನೆ. ಹೊಸ ಸಾಧನದೊಂದಿಗೆ, ನಾನು ಭಜನೆಯನ್ನು ಇನ್ನಷ್ಟು ಸುಲಭವಾಗಿ ಕೇಳಲು ಈ ಸ್ಪೀಕರ್ ನನಗೆ ಸಹಾಯ ಮಾಡುತ್ತದೆ” ಎಂದು ಹೇಳಿದ್ದರು.

ಜೆಡಿಯು ಕಚೇರಿ ಬಳಿಯಿರುವ ಪೋಸ್ಟರ್‌ನಲ್ಲಿ, “ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಾರಂಭಿಸಿದ ಸಾರ್ವಜನಿಕ ಕಲ್ಯಾಣ ಯೋಜನೆಗಳ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ” ಎಂದು ಬರೆಯಲಾಗಿದೆ.

ಇನ್ನು ಆರ್‌ಜೆಡಿಯ ತೇಜಸ್ವಿ ಯಾದವ್ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಂತಹ ರಾಜ್ಯದ ಯುವ ನಾಯಕರು ಸೈದ್ಧಾಂತಿಕ ಭಿನ್ನಾಭಿಪ್ರಾಯದ ಹೊರತಾಗಿಯೂ ನಿಶಾಂತ್ ರಾಜಕೀಯ ಪ್ರವೇಶದ ಬಗ್ಗೆ ವೈಯಕ್ತಿಕವಾಗಿ ನಿರ್ಧಾರ ಕೈಗೊಳ್ಳಬೇಕು, ಅವರ ರಾಜಕೀಯ ಪ್ರವೇಶವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಸದ್ಯ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಶುರುವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...