ಕೆಪಿಎಸ್‌ಸಿ ಪರೀಕ್ಷೆ ದಿನಾಂಕ ಬದಲಾವಣೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಕೆಪಿಎಸ್‌ಸಿ ಪರೀಕ್ಷೆ ಬಗ್ಗೆ ಯಾವುದೇ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ” ಎಂದರು.

ಎಲ್ಲ ಸಾಧ್ಯತೆಗಳಿಗೂ ಅವಕಾಶವಿದೆ

ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ ಚರ್ಚೆಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, “ಈ ಬಗ್ಗೆ ಎಲ್ಲ ಸಾಧ್ಯತೆಗಳಿಗೂ ಅವಕಾಶವಿದೆ” ಎಂದರು.

ವಾಪಸ್ಸಾಗಿರುವ ಬಿಲ್ ಗಳ ಪರಿಶೀಲನೆ

ಸರ್ಕಾರ ಸಲ್ಲಿಸಿದ ಬಿಲ್ ಗಳನ್ನು ರಾಜ್ಯಪಾಲರು ವಾಪಸ್ಸು ಕಳಿಸಿದ್ಧು, ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ , ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು” ಎಂದು ಹೇಳಿದರು.

ದರ ಹೆಚ್ಚಳದ ಬಗ್ಗೆ ಚರ್ಚಿಸಿ ಕ್ರಮ

ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...