ಶಕ್ತಿ ಯೋಜನೆಯಲ್ಲಿ ಯಾವ ಬದಲಾವಣೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿರುವ ಶಕ್ತಿ ಯೋಜನೆ ಸಂಬಂಧ ಪರಿಷ್ಕರಣೆ ಬಗ್ಗೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಯೋಜನೆಯಲ್ಲಿ ಬದಲಾವಣೆ ಬಗ್ಗೆ ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದರು. ಇದೇ ವೇಳೆ ವಕ್ಫ್ ಆಸ್ತಿ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟಿಸ್‌ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ” ಎಂದರು.

“ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಅದೇ ರೀತಿ ಇದು” ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...