ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಅಭಿಮತ

Date:

ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ ಸರ್ಕಾರ ಮಾಡಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದ್ದಾಗಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ. ನೆನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ ಅವರು, ಮುನಿಯಪ್ಪ ಅವರು ಎಲ್ಲರೂ ಮಾತನಾಡಿ ದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಅಗತ್ಯ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ” ಎಂದು ಹೇಳಿದರು.

“ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ” ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ ಎಂದರು. ಎಲ್.ಹನುಮಂತಯ್ಯ ಅವರು ಮಾತನಾಡಿ, “ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹು ಮಹಾರಾಜ್ ಮತ್ತು ನಾಲ್ವಡಿ ಅರಸರ ಪರಂಪರೆಯವರು. ಅದಕ್ಕೆ ಇದು ಸಾಧ್ಯವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...