ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿ ಕೆ ಶಿವಕುಮಾರ್

Date:

ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಉತ್ತರಿಸಿದ ಅವರು, “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದರು.

“ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

ಅವರ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ

ಮುಡಾ ಹಗರಣದ ವಿರುದ್ದ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ, “ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ”ಎಂದು ಖಾರವಾಗಿ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...