ಎಕ್ಸಿಟ್ ಪೋಲ್‌ ಬಗ್ಗೆ ವಿಶ್ವಾಸವಿಲ್ಲ, ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ದಾಟುತ್ತೆ: ಡಿ ಕೆ ಶಿವಕುಮಾರ್‌

Date:

ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಸದ್ಯ ಸಮೀಕ್ಷೆಗಳು ಹೊರ ಬರುತ್ತಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ನಮಗೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲ” ಎಂದಿದ್ದಾರೆ.

ಮಾಧ್ಯಮಗಳು ಸಂಪರ್ಕಿಸಿದಾಗ ಮಾಹಿತಿ ನೀಡಿದ ಅವರು, “ನಾನು ಮೊದಲೇ ಹೇಳೀದ್ದೇನೆ. ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ಹೋಗುತ್ತದೆ” ಎಂದು ಹೇಳಿದ್ದಾರೆ.

“ಈ ಎಕ್ಸಿಟ್ ಪೋಲ್ ಬಗ್ಗೆ ವಿಶ್ವಾಸ ಇಲ್ಲ. ಬಹಳ ಡೆಪ್ತ್ ಆಗಿ ಹೋಗೋದಿಲ್ಲ. ಸ್ಯಾಂಪಲ್ ಅಷ್ಟೆ ಕಲೆಕ್ಟ್ ಮಾಡಿರುತ್ತಾರೆ. ಹೀಗಾಗಿ, ನಾನು ಹೆಚ್ಚು ಮಾತನಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

18ನೇ ಲೋಕಸಭೆಗೆ ನಡೆಯುತ್ತಿರುವ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಕೊನೆಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ನಡೆಸಿದ ವಿವಿಧ ಸಂಸ್ಥೆಗಳ ವರದಿಗಳು ಬಹಿರಂಗಗೊಂಡಿವೆ. ಟಿವಿ9 ಪೋಲ್‌ಸ್ಟ್ರಾಟ್‌ ಪೀಪಲ್ಸ್ ಇನ್‌ಸೈಟ್‌ನ ಚುನಾವಣೋತ್ತರ ಸಮೀಕ್ಷೆಯು ಬಿಜೆಪಿ 18 ಸ್ಥಾನಗಳನ್ನು ಗಳಿಸಲಿದೆ ಎಂದಿದೆ.

ನ್ಯೂಸ್ 18 ನಡೆಸಿದ ಎಕ್ಸಿಟ್‌ ಪೋಲ್‌ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 21ರಿಂದ 24 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 3ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ. ಇತರೆ ಯಾವ ಪಕ್ಷಗಳೂ ರಾಜ್ಯದಲ್ಲಿ ಗೆಲ್ಲುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಬಿಜೆಪಿ ಮೈತ್ರಿಕೂಟ 23ರಿಂದ 25 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 3ರಿಂದ 5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದಿದೆ.

ಇಂಡಿಯಾ ಟಿ.ವಿ.: ಬಿಜೆಪಿ– 18ರಿಂದ 22; ಜೆಡಿಎಸ್– 1ರಿಂದ 3; ಕಾಂಗ್ರೆಸ್– 4ರಿಂದ 8

ಇಂಡಿಯಾ ಟುಡೇ: ಬಿಜೆಪಿ– 20ರಿಂದ 22; ಜೆಡಿಎಸ್– 2ರಿಂದ 3; ಕಾಂಗ್ರೆಸ್– 3ರಿಂದ 5

ಪೋಲ್ ಹಬ್‌: ಬಿಜೆಪಿ– 21ರಿಂದ 24; ಜೆಡಿಎಸ್– 1ರಿಂದ 2; ಕಾಂಗ್ರೆಸ್– 3ರಿಂದ 7

ಸಿ– ವೋಟರ್ಸ್‌: ಬಿಜೆಪಿ– 23; ಜೆಡಿಎಸ್– 2; ಕಾಂಗ್ರೆಸ್– 3ರಿಂದ 5

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...