ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ

Date:

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಿಗೊಳಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ. ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್‌ ನೀಡಿವೆ. ಆ ನೋಟಿಸ್‌ಅನ್ನು ಪರಿಶೀಲಿಸಲು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರಿಗೆ ನಿರ್ದೇಶನ ನೀಡಲಾಗಿದೆ.

ಇತ್ತೀಚೆಗೆ, ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನಿರಾಕರಿಸಿದ್ದರು. ವಿರೋಧ ಪಕ್ಷದ ನಾಯಕರಿಗೂ ಅವಕಾಶ ನೀಡದೇ ಇರುವ ಕುರಿತು ಆಕ್ರೋಶವೂ ವ್ಯಕ್ತವಾಗಿತ್ತು. ಅಲ್ಲದೆ, ರಾಷ್ಟ್ರಪತಿ ಭಾಷಣಕ್ಕೆ ಪ್ರಧಾನಿ ಮೋದಿ ಅವರು ಶುಕ್ರವಾರ ವಂದನಾ ಭಾಷಣ ಮಾಡಬೇಕಿತ್ತು. ಆದರೆ, ಮೋದಿ ಅವರಿಗೆ ಲೋಕಸಭೆಗೆ ಬಾರದಂತೆ ನಾನೇ ಸೂಚನೆ ನೀಡಿದ್ದೇನೆಂದು ಓಂ ಬಿರ್ಲಾ ಅವರು ಹೇಳಿಕೊಂಡಿದ್ದಾರೆ. ಮಾತ್ರವಲ್ಲದೆ, ಅವರು ಸರ್ಕಾರದ ಪರವಾಗಿ ಪಕ್ಷಪಾತ ಮಾಡುತ್ತಿದ್ದಾರೆಂದೂ ವಿಪಕ್ಷಗಳು ಆರೋಪಿಸಿವೆ.

ಈ ಎಲ್ಲ ಕಾರಣಗಳಿಗಾಗಿ, ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸಬೇಕೆಂದು ವಿಪಕ್ಷಗಳು ನಿರ್ಣಯ ಮಂಡಿಸಲು ಮುಂದಾಗಿವೆ. ವಿರೋಧ ಪಕ್ಷಗಳ ಸುಮಾರು 118 ಸಂಸದರು ನೋಟಿಸ್‌ಗೆ ಸಹಿ ಹಾಕಿದ್ದಾರೆ. “ಓಂ ಬಿರ್ಲಾ ಅವರು ಲೋಕಸಭೆಯ ಕಲಾಪಗಳನ್ನು ನಡೆಸುತ್ತಿರುವ ಸ್ಪಷ್ಟ ಪಕ್ಷಪಾತದಿಂದ ಕೂಡಿದೆ” ಎಂದು ನೋಟಿಸ್‌ನಲ್ಲಿ ಸಂಸದರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವಾರು ಸಂದರ್ಭಗಳಲ್ಲಿ, ವಿರೋಧ ಪಕ್ಷಗಳ ನಾಯಕರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ. ಸದನದಲ್ಲಿ ಮಾತನಾಡುವುದು ವಿಪಕ್ಷಗಳ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕು” ಎಂದು ಸಂಸದರು ಹೇಳಿದ್ದಾರೆ.

“ಫೆಬ್ರವರಿ 2 ರಂದು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗಿಲ್ಲ. ಇದು ಪ್ರತ್ಯೇಕ ನಿದರ್ಶನವಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಬಹುತೇಕ ಸಂದರ್ಭಗಳಲ್ಲಿ ಅವಕಾಶ ಕೊಟ್ಟಿಲ್ಲ. ಇನ್ನು, ಎಂಟು ಸಂಸದರನ್ನು ಅಮಾನತುಗೊಳಿಸುವ ಸ್ಪೀಕರ್ ಬಿರ್ಲಾ ಅವರ ನಿರ್ಧಾರವು ನಿರಂಕುಶವಾದಕ್ಕೆ ಸಮನಾಗಿದೆ. ಸಂಸದರು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಚಲಾಯಿಸಿದ್ದಕ್ಕಾಗಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ” ಎಂದು ದೂರಿದ್ದಾರೆ.

“ಫೆಬ್ರವರಿ 4 ರಂದು, ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಅವರು ಇಬ್ಬರು ಮಾಜಿ ಪ್ರಧಾನಿಗಳ ವಿರುದ್ಧ ಆಕ್ಷೇಪಾರ್ಹ ಮತ್ತು ವೈಯಕ್ತಿಕ ದಾಳಿ ನಡೆಸಿದ್ದಾರೆ. ಆದರೂ, ಲೋಕಸಭೆಯ ಶಿಸ್ತು ಮತ್ತು ಔಚಿತ್ಯದ ನಿಮಯಗಳ ಅಡಿಯಲ್ಲಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಬದಲಾಗಿ, ದ್ವೇಷಪೂರಿತ, ದಾಳಿಕೋರ ಮಾತುಗಳಿಗೆ ಅವಕಾಶ ನೀಡಲಾಯಿತು” ಎಂದು ಕಿಡಿಕಾರಿದ್ದಾರೆ.

“ಪ್ರತಿಪಕ್ಷದ ಸದಸ್ಯರು ನ್ಯಾಯಸಮ್ಮತ ಸಾರ್ವಜನಿಕ ಕಾಳಜಿಯ ವಿಷಯಗಳನ್ನು ಎತ್ತದಂತೆ ಓಂ ಬಿರ್ಲಾ ಅವರು ನಿರಂತರವಾಗಿ ತಡೆಯುತ್ತಿದ್ದಾರೆ. ಅವರ ಧೋರಣೆಯು ನೋವು ಮತ್ತು ದುಃಖವನ್ನುಂಟುಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ನೋಟಿಸ್‌ಅನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಓಂ ಬಿರ್ಲಾ ಸೂಚಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ವಿಪಕ್ಷಗಳ ನೋಟಿಸ್‌ಗೆ ಕಾಂಗ್ರೆಸ್‌, ಸಮಾಜವಾದಿ ಪಕ್ಷ, ಡಿಎಂಕೆ ಸೇರಿದಂತೆ ಹಲವು ಪಕ್ಷಗಳ ಸಂಸದರು ಸಹಿ ಹಾಕಿದ್ದಾರೆ. ಆದಾಗ್ಯೂ, ಟಿಎಂಸಿ ಸಂಸದರು ಸಹಿ ಹಾಕಿಲ್ಲವೆಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...