ಮೂವರು ಡಿಸಿಎಂ ನೇಮಕ ಬಗ್ಗೆ ಸಚಿವರ ಹೇಳಿಕೆ ವೈಯಕ್ತಿಕ; ಈ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಪರಮೇಶ್ವರ್‌

Date:

ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯವನ್ನು ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದು ಇರಬಹುದು. ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ” ಎಂದರು.

ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, “ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ ಜತೆ ಚರ್ಚಿಸುತ್ತಾರೆ. ಆಡಳಿತದಲ್ಲಿರುವಾಗ ಪಕ್ಷದ ಹೈಕಮಾಂಡ್ ಸಲಹೆಗಳನ್ನು ಸ್ವೀಕರಿಸಬೇಕು. ಇದೆಲ್ಲ ಸಾಮಾನ್ಯವಾಗಿ ನಡೆಯುವ ಬೆಳವಣಿಗೆ. ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಮುವಾದಿ ಕಿರೀಟ ಧರಿಸಿಕೊಂಡ ದೇವೇಗೌಡರು ಹತಾಶೆಯಲ್ಲಿದ್ದಾರೆ, ಅವರ ಮಾತು ನನಗೆ ಆಶೀರ್ವಾದ: ಸಿದ್ದರಾಮಯ್ಯ

“ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಯಾರು ಹೇಳಿಲ್ಲ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮದಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ಸೂಚಿಸಿದರೆ ಮುಂದಿನ ತೀರ್ಮಾನದ ಬಗ್ಗೆ ತಿಳಿಸುತ್ತೇನೆ” ಎಂದರು.

“ಬಾಂಬ್ ಬೆದರಿಕೆ ಕರೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಕಸ್ತೂರ ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೂ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಐಪಿ ಅಡ್ರೆಸ್ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...